
ಚಾಂಪಿಯನ್ಸ್ ಟ್ರೋಫಿಯ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ಸೇಡು ತೀರಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ. 2023ರ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಸೋಲಿಸಿದ್ದ ಆಸ್ಟ್ರೇಲಿಯಾ, ಚಾಂಪಿಯನ್ಸ್ ಟ್ರೋಫಿ ಸೆಮಿಫೈನಲ್ ಪಂದ್ಯದಲ್ಲಿ ಭಾರತಕ್ಕೆ ಎದುರಾಗಲಿದೆ. ಗ್ರೂಪ್ ಎ ನಲ್ಲಿ ಎರಡನೇ ಸ್ಥಾನದಲ್ಲಿರುವ ಆಸ್ಟ್ರೇಲಿಯಾ ನಾಳೆ ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿದೆ. ಆಸ್ಟ್ರೇಲಿಯಾದಲ್ಲಿ ಮಿಚೆಲ್ ಸ್ಟಾರ್ಕ್, ಪ್ಯಾಟ್ ಕಮಿನ್ಸ್, ಜೋಶ್ ಹೇಜಲ್ವುಡ್ರಂತಹ ಆಟಗಾರರು ಇಂಜುರಿಯಿಂದ ಬಳಲುತ್ತಿದ್ದು ಟೂರ್ನಿಯಲ್ಲಿ ಆಡುತ್ತಿಲ್ಲ. ಅವರ ಅನುಪಸ್ಥಿತಿಯಲ್ಲಿ ಆಸ್ಟ್ರೇಲಿಯಾ ಸೆಮಿಫೈನಲ್ ಹಂತ ತಲುಪಿದ್ದು ಭಾರತ ವಿರುದ್ದ ಯಾವ ತಂತ್ರದೊಂದಿಗೆ ಕಣಕ್ಕಿಳಿಯಲಿದೆ ಎಂಬುದು ಕಾದು ನೋಡಬೇಕಾಗಿದೆ. ಇನ್ನೊಂದು ಕಡೆ ಟೂರ್ನಿಯಲ್ಲಿ ಗ್ರೂಪ್ ಬಿ ಹಂತದಿಂದ ಒಂದು ಪಂದ್ಯ ಸೋಲದೇ ಸೆಮಿಫೈನಲ್ ಟಿಕೆಟ್ ಪಡೆದಿರುವ ಟೀಂ ಇಂಡಿಯಾ ತನ್ನ ಸೇಡನ್ನು ತೀರಿಸಿಕೊಳ್ಳುತ್ತಾ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳಿದ್ದಾರೆ.

ಅಭಿಷೇಕ್. ಎಸ್