Ashwaveega News 24×7 ಮಾರ್ಚ್ 12 – 2026 : ತಿರುವನಂತಪುರಂ: ಉತ್ತರ ಪ್ರದೇಶದ ಕುಂಭಮೇಳದಲ್ಲಿ ವೈರಲ್ ಆಗಿ ಜನಪ್ರಿಯತೆ ಪಡೆದಿದ್ದ ಮೊನಾಲಿಸಾ ಇದೀಗ ಮುಸ್ಲಿಂ ಯುವಕನೊಂದಿಗೆ ವಿವಾಹವಾಗಿದ್ದು, ಈ ಮದುವೆ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.
ಮೊನಾಲಿಸಾ ತನ್ನ ಪ್ರಿಯಕರ ಫರ್ಮಾನ್ ಖಾನ್ ಜೊತೆ ಕೇರಳದಲ್ಲಿ ಪೊಲೀಸರ ಭದ್ರತೆಯೊಂದಿಗೆ ವಿವಾಹವಾಗಿದ್ದಾರೆ. ಕೇರಳದ ಪೂವಾರ್ನ ಅರುಮಾನೂರ್ ನೈನಾರ್ ದೇಗುಲದಲ್ಲಿ ಇಬ್ಬರೂ ಹಸೆಮಣೆ ಏರಿದ್ದಾರೆ.
ಮದುವೆಗೆ ಮೊನಾಲಿಸಾ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಭದ್ರತೆ ಒದಗಿಸಿದ್ದರು. ಈ ವಿವಾಹ ಸಮಾರಂಭದಲ್ಲಿ ಕೇರಳದ ಸಚಿವ ಶಿವನ್ ಕುಟ್ಟಿ ಕೂಡ ಭಾಗವಹಿಸಿದ್ದರು.
ಮೊನಾಲಿಸಾ ಮತ್ತು ಫರ್ಮಾನ್ ಖಾನ್ ನಡುವೆ ಒಂದೂವರೆ ವರ್ಷಗಳ ಹಿಂದೆ ಫೇಸ್ಬುಕ್ನಲ್ಲಿ ಪರಿಚಯವಾಗಿತ್ತು. ದಿನ ಕಳೆದಂತೆ ಈ ಪರಿಚಯ ಪ್ರೀತಿಗೆ ತಿರುಗಿದ್ದು, ಕೊನೆಗೆ ಪೋಷಕರ ವಿರೋಧದ ನಡುವೆಯೇ ಇಬ್ಬರೂ ಮದುವೆಯಾಗಲು ನಿರ್ಧರಿಸಿದ್ದಾರೆ.
ಉತ್ತರ ಪ್ರದೇಶದ ಕುಂಭಮೇಳದಲ್ಲಿ ಮೊನಾಲಿಸಾ ವೈರಲ್ ಆದ ಬಳಿಕ ಸಾಕಷ್ಟು ಜನಪ್ರಿಯತೆ ಗಳಿಸಿದ್ದರು. ಬಳಿಕ ಅವರು ಸಿನಿಮಾಗಳಲ್ಲಿಯೂ ನಟಿಸಿ ಗಮನ ಸೆಳೆದಿದ್ದರು. ಇದೀಗ ಅವರ ಮದುವೆ ಮತ್ತೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ …
