ಬಿಜೆಪಿ ಪಕ್ಷದಲ್ಲಿ ನಾಯಕರ ನಡುವೆ ಗದ್ದಲ ನಡೆಯುತ್ತಿವೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಹೇಳಿದ್ರು. ಧಾರವಾಡದಲ್ಲಿ ಮಾತನಾಡಿದ ಅವರು. ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನಡುವೆ ಮಾತಿನ ಚಕಮಕಿ ನಡೆಯುತ್ತಲೇ ಇದೆ.
ಇದೀಗ ಬಿಜೆಪಿಯಲ್ಲಿ ಎರಡು ಪಂಗಡಗಳಾಗಿದ್ದು, ರಾಜ್ಯದಲ್ಲಿ ಎರಡು ಟೀಂಗಳಿಂದ ಪ್ರತ್ಯೇಕ ಚಟುವಟಿಕೆಗಳು ನಡೆಯುತ್ತಿದೆ. ಇನ್ನೂ ಇದರ ನಡುವೆ ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಇರೋದು ಸಹ ನಿಜ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಒಪ್ಪಿಕೊಂಡಿದ್ದಾರೆ.