Justice Vibhu Bakhru
Ashwaveega News 24×7 ಜು.19: ಕರ್ನಾಟಕ ಹೈಕೋರ್ಟ್ನ 35ನೇ ಮುಖ್ಯ ನ್ಯಾಯಮೂರ್ತಿಯಾಗಿ ವಿಭು ಬಕ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬೆಂಗಳೂರಿನ ರಾಜಭವನದ ಗಾಜಿನ ಮನೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನ್ಯಾ. ವಿಭು ಬಕ್ರು ಅವರಿಗೆ ಪ್ರಮಾಣ ವಚನ ಬೋಧಿಸಿದರು. ನ್ಯಾ. ಬಕ್ರು ಅವರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ವಿ ಕಾಮೇಶ್ವರ ರಾವ್ ಅವರು ವೇದಿಕೆಯಲ್ಲಿದ್ದರು. ಕಾನೂನು ಸಚಿವ ಎಚ್ ಕೆ ಪಾಟೀಲ್ ಹೈಕೋರ್ಟ್ ನ್ಯಾಯಮೂರ್ತಿಗಳು ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದರು.
ಕಳೆದ ಮೇ 26ರಂದು ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ಕೊಲಿಜಿಯಂ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯನ್ನಾಗಿ ನೇಮಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿತ್ತು. ಜುಲೈ 14ರಂದು ಕೇಂದ್ರ ಸರ್ಕಾರವು ವಿಭು ಬಕ್ರು ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿ ಅಧಿಸೂಚನೆ ಪ್ರಕಟಿಸಿತ್ತು.
