ಕಲಬುರಗಿ : ಪ್ರೀತಿಸಿದ ಹುಡುಗಿ ಕೈ ಕೊಟ್ಟು ಮತ್ತೊಬ್ಬನ ಜೊತೆ ಮದುವೆಯಾದ ಹಿನ್ನಲೆ ಡೆತ್ ನೋಟ್ ಬರೆದಿಟ್ಟು ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಕಮಲಾಪುರ ತಾಲ್ಲೂಕಿನ ಮಡಕಿ ಗ್ರಾಮದಲ್ಲಿ ನಡೆದಿದೆ.
ದೇವೆಂದ್ರಪ್ಪ ಕಲಕೇರಿ (32) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಯಾಗಿದ್ದು, ಈ ಕುರಿತು ನರೋಣಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.