Ashwaveega News 24×7 ಡಿಸೆಂಬರ್. 01: ಕೊಲ್ಹಾಪುರದ ಕನ್ನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬಸವ ತತ್ವದ ಕೆಲ ಸ್ವಾಮೀಜಿಗಳನ್ನು ತಾಲಿಬಾನಿಗಳಿಗೆ ಹೋಲಿಕೆ ಮಾಡಿದ್ದಾರೆ.
‘ಬಸವ ತತ್ವದ ತಾಲಿಬಾನ್’ ಗಳು ಎನ್ನುವ ಮೂಲಕ ಮತ್ತೆ ಕನ್ನೇರಿ ಶ್ರೀ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದಲ್ಲಿ ಭಜರಂಗದಳ ಆಯೋಜಿಸಿದ್ದ ಹನುಮ ಮಾಲಾ ಧೀಕ್ಷಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಮಾಲೆ ಪೊಲೀಸ್ ಇದ್ದಹಾಗೆ, ನಮ್ಮನ್ನು ಕೆಟ್ಟ ಕೆಲಸ ಮಾಡಲು ಬಿಡುವುದಿಲ್ಲ.
ಏನಾದ್ರೂ ತಪ್ಪು ಕೆಲಸ ಮಾಡಲು ಹೊರಟ್ರೆ, ಅದು ನಮ್ಮನ್ನು ತಡೆಯುತ್ತೆ. ನಮ್ಮಲ್ಲಿ ಪಂಡರಾಪುರಕ್ಕೆ ಹೋಗುವವರು ಮಾಲೆ ಹಾಕಿಕೊಳ್ಳುತ್ತಾರೆ. ಯಾರಾದ್ರೂ ಮದ್ಯದಂಗಡಿ ಕಡೆ ಹೊರಟ್ರೆ, ಕೊರಳಿನಲ್ಲಿರುವ ಪೊಲೀಸ್ ನಮ್ಮನ್ನು ತಡೆಯುತ್ತೆ. ಮತ್ತೆ ಯಾರಾದ್ರೂ ಅಡ್ಡೆಗೆ ಹೊರಟಿದ್ರೆ, ನಾನು ಕೊರಳಲ್ಲಿ ಇದ್ದೇನೆ.
ಬಾ ಈ ಕಡೆ ಎಂದು ಕರೆಯುತ್ತೆ. ಈ ಮಾಲೆ ಮಾತನಾಡುವುದಿಲ್ಲ. ಹನುಮ ಮಾಲೆಯ ಕುರಿತು ಕೆಲವರು ಟೀಕೆ ಮಾಡಬಹುದು. ಕಮ್ಯುನಿಸ್ಟರು ಹಾಗೂ ನಮ್ಮಂಥ ಕಾವಿ ಬಟ್ಟೆ ಧರಿಸಿರುವ ಬಸವ ತಾಲಿಬಾನಿಗಳು ಮಾಲೆ ಬಗ್ಗೆ ಟೀಕೆ ಮಾಡಬಹುದು. ಕೈಯಲ್ಲಿ ಬಡಗಿ ಹಿಡಿದು ಅಡ್ಡಾಡಿದ್ದನ್ನ ವಿರೋಧ ಮಾಡುತ್ತಾರೆ. ಬಡಗಿ ಬದಲು ಏನು ಆರತಿ ತಟ್ಟೆ ಹಿಡಿದುಕೊಳ್ಳಬೇಕಾ? ನಮ್ಮ ಹುಡುಗಿಯರನ್ನ ಹೊತ್ತುಕೊಂಡು ಹೋಗುತ್ತಿದ್ದಾರೆ.
ಅಂಥವರನ್ನ ಹಿಡಿದುಕೊಂಡು ಬಂದು ತಿಳಿಯುವ ಭಾಷೆಯಲ್ಲಿ ಹೇಳಬೇಕು ಎಂದು ಲಿಂಗಾಯತ ಸ್ವಾಮೀಜಿಗಳ ವಿರುದ್ಧ ವಿವಾದಾತ್ಮಕ ಪದ ಬಳಕೆ ಮಾಡಿದ್ದಾರೆ. ಈ ಮೂಲಕ ಮತ್ತೇ ವಿವಾದಕ್ಕೆ ಗುರಿಯಾಗಿದ್ದಾರೆ.
