Ashwaveega News 24×7 ಮಾರ್ಚ್ 06 – 2026 : ರಾಜ್ಯ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು . ರಾಜ್ಯಗಳ ವಿಚಾರದಲ್ಲಿ ಕೇಂದ್ರ ಸರ್ಕಾರ ಸಂವೇದನಾಶೀಲವಾಗಿ ವರ್ತಿಸುತ್ತಿಲ್ಲ ಎಂದು ಆರೋಪಿಸಿದ ಸಿಎಂ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ಕಲ್ಯಾಣವಾಗುತ್ತಿದೆ .. ಅಂತ ಹೇಳಿದರು.
ವಿಧಾನಸಭೆಯಲ್ಲಿ ಬಜೆಟ್ ಮಂಡನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು . ರಾಜ್ಯಗಳ ಹಿತಾಸಕ್ತಿಯ ವಿಚಾರದಲ್ಲಿ ಒಕ್ಕೂಟ ಸರ್ಕಾರ ಸಂವೇದನಾಶೀಲವಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಿಎಂ ಆರೋಪಿಸಿದರು.
ರಾಜ್ಯದ ಅಭಿವೃದ್ಧಿ ಮತ್ತು ಜನರ ಕಲ್ಯಾಣವೇ ತಮ್ಮ ಸರ್ಕಾರದ ಪ್ರಮುಖ ಗುರಿ ಎಂದು ಸಿದ್ದರಾಮಯ್ಯ ಹೇಳಿದರು . ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಜನರಿಗೆ ನೇರ ಪ್ರಯೋಜನವಾಗುತ್ತಿದೆ ಎಂದು ಅವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳ ಪರಿಣಾಮವಾಗಿ ಕನ್ನಡಿಗರ ಕೊಳ್ಳುವ ಶಕ್ತಿ ಹೆಚ್ಚಾಗಿದೆ. ಈ ಯೋಜನೆಗಳನ್ನು ಜಗತ್ತೇ ಕೊಂಡಾಡುತ್ತಿದೆ ಎಂದು ಸಿಎಂ ಹೇಳಿದರು. ಸರ್ವರ ಏಳಿಗೆಯನ್ನು ಬಯಸುವ ಸರ್ಕಾರ ನಮ್ಮದು ಎಂದು ಹೇಳಿದ ಸಿದ್ದರಾಮಯ್ಯ, ಸದೃಢ ಮತ್ತು ಸಮೃದ್ಧ ಕರ್ನಾಟಕ ನಿರ್ಮಾಣವೇ ಸರ್ಕಾರದ ಮುಖ್ಯ ಗುರಿ ಎಂದು ಸ್ಪಷ್ಟಪಡಿಸಿದರು.
ಒಟ್ಟಾರೆ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ರಾಜ್ಯದ ಸಮಗ್ರ ಅಭಿವೃದ್ಧಿ ಸಾಧಿಸುವುದೇ ಸರ್ಕಾರದ ಉದ್ದೇಶ ಎಂದು ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್ ಭಾಷಣದಲ್ಲಿ ಒತ್ತಿ ಹೇಳಿದರು.
