Ashwaveega News 24×7 ಮಾರ್ಚ್ 06 – 2026 : ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಲವು ಮಹತ್ವದ ಘೋಷಣೆಗಳನ್ನು ಮಾಡಿದ್ದಾರೆ. ಶಿಕ್ಷಣ, ಧಾರ್ಮಿಕ ಹಾಗೂ ಸಾಮಾಜಿಕ ಕ್ಷೇತ್ರಗಳಿಗೆ ದೊಡ್ಡ ಮಟ್ಟದ ಅನುದಾನ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ರಾಜ್ಯ ಬಜೆಟ್ನಲ್ಲಿ ಅಲ್ಪಸಂಖ್ಯಾತ ಸಮುದಾಯಗಳಿಗೆ ಹಲವು ಯೋಜನೆಗಳನ್ನು ಘೋಷಿಸಲಾಗಿದೆ. ಉರ್ದು ಶಾಲೆಗಳ ಉನ್ನತೀಕರಣಕ್ಕಾಗಿ ಸುಮಾರು 600 ಕೋಟಿ ರೂಪಾಯಿ ಅನುದಾನ ನೀಡಲಾಗುತ್ತದೆ ಎಂದು ಸಿಎಂ ಘೋಷಿಸಿದರು.
ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಲ್ಯಾಪ್ಟಾಪ್ ಖರೀದಿಗೆ ತಲಾ 50 ಸಾವಿರ ರೂಪಾಯಿ ಸಹಾಯಧನ ನೀಡುವ ಯೋಜನೆ ಘೋಷಿಸಲಾಗಿದೆ.
ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳನ್ನು ಆರಂಭಿಸುವುದಾಗಿ ಸರ್ಕಾರ ತಿಳಿಸಿದೆ. ಜೊತೆಗೆ ಬೌದ್ಧ ಧರ್ಮದ ಧಮ್ಮಾಚಾರಿಗಳಿಗೆ ಮಾಸಿಕ 6 ಸಾವಿರ ರೂಪಾಯಿ ಗೌರವಧನ ನೀಡುವ ಯೋಜನೆಯನ್ನೂ ಘೋಷಿಸಲಾಗಿದೆ.
ಕ್ರೈಸ್ತ ಸಮುದಾಯದ ವೃದ್ಧಾಶ್ರಮಗಳಿಗೆ ತಲಾ 50 ಲಕ್ಷ ರೂಪಾಯಿ ಸಹಾಯಧನ ನೀಡಲಾಗುತ್ತದೆ ಎಂದು ಸಿಎಂ ಹೇಳಿದರು. ಜೈನ, ಬೌದ್ಧ ಮತ್ತು ಸಿಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗಿದೆ. ಇದಕ್ಕೂ ಜೊತೆಗೆ ಹುಬ್ಬಳ್ಳಿ ಮತ್ತು ಕಲಬುರಗಿಯಲ್ಲಿ ಹಜ್ ಭವನಗಳನ್ನು ನಿರ್ಮಿಸುವ ಯೋಜನೆಯನ್ನೂ ಸರ್ಕಾರ ಘೋಷಿಸಿದೆ.
ಒಟ್ಟಾರೆ ಅಲ್ಪಸಂಖ್ಯಾತ ಸಮುದಾಯಗಳ ಶಿಕ್ಷಣ, ಸಾಮಾಜಿಕ ಮತ್ತು ಧಾರ್ಮಿಕ ಅಭಿವೃದ್ಧಿಗೆ ಒತ್ತು ನೀಡುವ ಹಲವು ಯೋಜನೆಗಳನ್ನು ಈ ಬಜೆಟ್ನಲ್ಲಿ ಸರ್ಕಾರ ಘೋಷಿಸಿರುವುದು ಗಮನ ಸೆಳೆದಿದೆ …
