ಕಾಂಗ್ರೆಸ್ನಲ್ಲಿ ನವೆಂಬರ್ ಕ್ರಾಂತಿ ಚರ್ಚೆ ಕಾವೇರಿದೆ. ಇದ್ರ ನಡುವೆಯೇ ಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್ ಸಹ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ. ಪರಮೇಶ್ವರ್, ಮಹದೇವಪ್ಪ ಹಾಗೂ ಸತೀಶ್ ಬ್ರೇಕ್ಫಾಸ್ಟ್ ಮೀಟಿಂಗ್ ಮಾಡಿದ್ದು, ವಿರೋಧಿ ಬಣದ ಕಣ್ಣು ಕುಕ್ಕುವಂತೆ ಮಾಡಿದೆ.
ಈ ಸಭೆಯಲ್ಲಿ ಅಧಿಕಾರ ಹಸ್ತಾಂತರ, ಕ್ಯಾಬಿನೆಟ್ ಪುನಾರಚನೆ ಕುರಿತು ಚರ್ಚಿಸಲಾಗಿದೆ ಎನ್ನಲಾಗಿದೆ. ಇನ್ನೂ ಗುಪ್ತ ಸಭೆಯ ಬಗ್ಗೆ ಪರಮೇಶ್ವರ್ ಮಾತನಾಡಿದ್ದು, ಬ್ರೇಕ್ ಫಾಸ್ಟ್ ಮೀಟಿಂಗ್ ಇದೇ ಮೊದಲೇನಲ್ಲ. ಹೆಚ್ಚುವರಿ ಡಿಸಿಎಂ ಬಗ್ಗೆ ನಾನು ಒತ್ತಾಯ ಮಾಡಿಲ್ಲ ಎಂದ್ರು.
ಇನ್ನೂ ಪ್ರತಿ ವರ್ಷ ಸಿಎಂ ಔತಣಕೂಟ ಕರೆಯುತ್ತಾರೆ. ಇದರಲ್ಲಿ ಏನು ಹೊಸತೇನಿಲ್ಲ ಎಂದು ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಕರೆದ ಔತಣಕೂಟ ಸಭೆಯಲ್ಲಿ ವಿಶೇಷ ಏನಿದೆ ಎಂದು ಸಚಿವ ಶಿವರಾಜ್ ತಂಗಡಗಿ ಪ್ರಶ್ನೆ ಮಾಡಿದ್ದಾರೆ.
ನವೆಂಬರ್ ಕ್ರಾಂತಿ ಚರ್ಚೆ ಬೆನ್ನಲ್ಲೇ ಕಮಲ ನಾಯಕರು ಅಲರ್ಟ್ ಆಗಿದ್ದಾರೆ. ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ನವೆಂಬರ್ ಕ್ರಾಂತಿ ಈಗಾಗಲೇ ಶುರುವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಅಧಿಕಾರ ಹಂಚಿಕೆ ಬಗ್ಗೆ ಸಚಿವರು, ಶಾಸಕರ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಬಿಹಾರ ಎಲೆಕ್ಷನ್ ಆದ ಬಳಿಕ ಎಲ್ಲಾ ಗೊತ್ತಾಗಬಹುದು. ಸಿದ್ದರಾಮಯ್ಯ ಕುರ್ಚಿಗೆ ಗಂಡಾಂತರ ಕಾದಿದೆಯೋ..? ಮುಂದೆ ಯಾರಿಗೆ ಅದೃಷ್ಟ ಸಿಗಲಿದೆ ಅಂತಾ ನೋಡೋಣ ಎಂದು ವಿಜಯೇಂದ್ರ ಎಂದಿದ್ದಾರೆ. ಕೊಲೆ, ಸುಲಿಗೆ, ಅತ್ಯಾಚಾರ, ಭ್ರಷ್ಟಾಚಾರ ಹಾಗೂ ಅತಿವೃಷ್ಠಿ ಇವೆಲ್ಲಾ ರಾಜ್ಯದ ದಾಖಲೆಯಾಗಿದ್ದು, ಈ ಸಂಭ್ರಮಕ್ಕೆ ಔತಣಕೂಟ ಮಾಡುತ್ತಿದ್ದಾರೆ ಎಂದು MLC ಸಿ.ಟಿ ರವಿ ವ್ಯಂಗ್ಯವಾಡಿದ್ದಾರೆ.
