
transport employees strike bmtc mejestic
Ashwaveega News 24×7 ಅ. 05: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕಿಳಿದಿದ್ದಾರೆ. ಈ ಹಿನ್ನೆಲೆ ರಾಜ್ಯಾದ್ಯಂತ ಜನ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.
ಬೆಂಗಳೂರಿನಲ್ಲಿ ಸಾರಿಗೆ ನೌಕರರ ಮುಷ್ಕರದ ಬಿಸಿ ಭಾಗಶಃ ತಟ್ಟಿದೆ. ಹಲವೆಡೆ ಬಸ್ಗಳು ಸಂಚರಿಸುತ್ತಿವೆ. ಏರ್ಪೋರ್ಟ್ ಪ್ರಯಾಣಿಕರಿಗೆ ಯಾವುದೇ ಸಮಸ್ಯೆ ಆಗಿಲ್ಲ. ಆದರೆ, ಕೆಂಪೇಗೌಡ ಬಸ್ ನಿಲ್ದಾಣ ಮತ್ತು ಯಶವಂತಪುರ ಬಸ್ ನಿಲ್ದಾಣಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಬಸ್ ಸಂಚಾರ ಆರಂಭವಾಗಿಲ್ಲ.
ರಾಜ್ಯ ಸರ್ಕಾರದ ಈ ಸೂಚನೆ ಬೆನ್ನಲ್ಲೇ ಹಲವು ಜಿಲ್ಲೆಗಳಲ್ಲಿ ಪರ್ಯಾಯ ವ್ಯವಸ್ಥೆಯನ್ನು ಸಾರಿಗೆ ನಿಗಮಗಳು ಮಾಡಿಕೊಂಡಿವೆ. ಬೆಂಗಳೂರಿನಲ್ಲಿ ಸಾರಿಗೆ ಮುಷ್ಕರದಿಂದಾಗಿ ಬಿಎಂಟಿಸಿ ಬಸ್ಗಳ ಸಂಚಾರ ಭಾಗಶಃ ಸ್ಥಗಿತವಾಗಿದೆ. ಹೀಗಾಗಿ, ಬೆಂಗಳೂರು ಒಂದರಲ್ಲೇ 4 ಸಾವಿರ ಖಾಸಗಿ ಬಸ್ಗಳನ್ನ ನೀಡುವಂತೆ ಖಾಸಗಿ ಬಸ್ ಮಾಲೀಕರ ಸಂಘಕ್ಕೆ ಸಾರಿಗೆ ಆಯುಕ್ತರು ಬೇಡಿಕೆ ಇಟ್ಟಿದ್ದಾರೆ.
ರಾಜ್ಯಾದ್ಯಂತ 11 ಸಾವಿರ ಬಸ್ ಕೇಳಿದ್ದಾರೆ. ಆದರೆ, ಇನ್ನೂ ಅಂತಿಮಗೊಳಿಸಿಲ್ಲ ಎಂದು ಖಾಸಗಿ ಬಸ್ ಮಾಲೀಕರ ಸಂದ ನಟರಾಜ್ ಶರ್ಮಾ ಮಾಹಿತಿ ನೀಡಿದ್ದಾರೆ. ಅಲ್ಲದೆ, ಬುಧವಾರಕ್ಕೆ ಬಸ್ ನೀಡುವಂತೆ ಕೋರಿದ್ದಾರೆ ಎಂದಿರುವುದು ಹೊಸ ಗೊಂದಲ ಸೃಷ್ಟಿಸಿದೆ.
ಈ ಮಧ್ಯೆ, ಸರ್ಕಾರದ ಸೂಚನೆ ದೊರೆಯುತ್ತಿದ್ದಂತೆಯೇ ಜಿಲ್ಲೆಗಳ ಸಾರಿಗೆ ನಿಗಮದ ಮುಖ್ಯಸ್ಥರು ಪ್ರತ್ಯೇಕ ವ್ಯವಸ್ಥೆಗಳನ್ನ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸರ್ಕಾರಿ ಬಸ್ಗಳನ್ನೇ ಇಳಿಸಲು ಪರ್ಯಾಯ ವ್ಯವಸ್ಥೆ ಮಾಡಲಾಗಿದೆ.
ಹೊಸದಾಗಿ ಸೇರಿದ 85 ಸಿಬ್ಬಂದಿಯನ್ನು ಬಳಸಿ ಚಾಲನೆ ಮಾಡಲು, ಖಾಸಗಿಯಾಗಿ ನೇಮಕವಾದ 100 ಸಿಬ್ಬಂದಿ ಬಳಸಲ ತೀರ್ಮಾನಿಸಲಾಗಿದೆ. ಖಾಸಗಿ ಬಸ್ ಮತ್ತು ಖಾಸಗಿ ವಾಹನಗಳ ವ್ಯವಸ್ಥೆ ಮಾಡಲಾಗಿದೆ.