
ಐಪಿಎಲ್ ಸೀಸನ್18 ಮಾರ್ಚ್ 22ರಿಂದ ಆರಂಭವಾಗಲಿದೆ. ಉದ್ಘಾಟನಾ ಪಂದ್ಯದಲ್ಲೇ ಆರ್ಸಿಬಿ ಹಾಗೂ ಕೆಕೆಆರ್ ತಂಡಗಳು ಸೆಣಸಾಡಲಿವೆ. ಟೂರ್ನಿ ಆರಂಭಕ್ಕೂ ಮುನ್ನ ಆರ್ಸಿಬಿ ಸ್ಟಾರ್ ಬ್ಯಾಟ್ಸಮನ್ ವಿರಾಟ್ ಕೊಹ್ಲಿ ಹೊಸ ಹೇರ್ ಸ್ಟೈಲ್ನಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ಕಡೆ ಆರ್ಸಿಬಿ ತಂಡ ಇದಾಗಲೇ ತನ್ನ ಅಭ್ಯಾಸವನ್ನು ಆರಂಭಿಸಿದೆ. ಬೆಂಗಳೂರು ಫ್ಯಾನ್ಸ್ ಈ ಎರಡು ಪೋಟೋಗಳನ್ನು ಟ್ಯಾಗ್ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ರಿಲೀಸ್ ಮಾಡಿದ್ದಾರೆ. ಬಾಸ್ ಇಸ್ ಗೇಟಿಂಗ್ ರೆಡಿ, ಈ ಸಲ ಕಪ್ ನಮ್ದೇ, ಕೊಹ್ಲಿ ಆರೆಂಜ್ ಕ್ಯಾಪ್ ಗಳಿಸಲಿದ್ದಾರೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಮಾತನಾಡಿಕೊಳ್ಳುತ್ತಿದ್ದಾರೆ. ಆರ್ಸಿಬಿ ತಂಡಕ್ಕೆ ವಿರಾಟ್ ಕೊಹ್ಲಿ ಇನ್ನೂ ಸೇರಿಕೊಂಡಿಲ್ಲ. ಇನ್ನೆರಡು ದಿನಗಳಲ್ಲಿ ಕೊಹ್ಲಿ ತಂಡ ಸೇರಿಕೊಳ್ಳುವ ನಿರೀಕ್ಷೆಯಿದೆ. ಹೊಸ ಲುಕ್ನಲ್ಲಿ ಹೊಸ ಸೀಸನ್ ಆರಂಭಿಸುತ್ತಿರುವ ವಿರಾಟ್ ಕೊಹ್ಲಿಯ ಆಗಮನಕ್ಕೆ ಅಭಿಮಾನಿಗಳು ಎರಡು ಕಣ್ಣಲ್ಲಿ ಎದುರು ನೋಡುತ್ತಿದ್ದಾರೆ.

ಅಭಿಷೇಕ್.ಎಸ್