
ದುಬೈ ಅಂತರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ 2025 ಗ್ರೂಪ್ ಎ ಪಂದ್ಯದಲ್ಲಿ ಭಾರತ ತಂಡದ ಸ್ಟಾರ್ ಬ್ಯಾಟ್ಸ್ಮ್ಯಾನ್ ವಿರಾಟ್ ಕೊಹ್ಲಿ 111 ಎಸೆತಗಳಲ್ಲಿ 100 ರನ್ ಗಳಿಸುವ ಮೂಲಕ ಹಾಗೂ ಶತಕ ಸಿಡಿಸುವ ಮೂಲಕ ಪಾಕಿಸ್ತಾನದ ವಿರುದ್ಧ ಭಾರತ ತಂಡಕ್ಕೆ ಆರು ವಿಕೆಟ್ಗಳ ಸ್ಮರಣೀಯ ಗೆಲುವು ತಂದು ಕೊಟ್ಟರು. ಇದು ಕೊಹ್ಲಿಯ 51 ನೇ ಏಕದಿನ ಶತಕ ಮತ್ತು ಪಾಕಿಸ್ತಾನದ ವಿರುದ್ಧ 4 ನೇ ಶತಕವಾಗಿದೆ.

ಇನ್ನೂ ಫ್ಯಾನ್ಸ್ ಕಿಂಗ್ ಕೊಹ್ಲಿ ಸೆಂಚುರಿಯನ್ನು ಭರ್ಜರಿಯಾಗಿ ಸಂಭ್ರಮಿಸಿದ್ದು, ಉದ್ಯಮಿ ಆನಂದ್ ಮಹೀಂದ್ರಾ ಕೂಡಾ ಹೈ ವೋಲ್ಟೇಜ್ ಪಂದ್ಯದಲ್ಲಿ ಶತಕ ಸಿಡಿಸಿದ ಕೊಹ್ಲಿಯನ್ನು ಶ್ಲಾಘಿಸಿದ್ದಾರೆ. ಈ ಕುರಿತ ಪೋಸ್ಟ್ ಒಂದು ಇದೀಗ ಸಖತ್ ವೈರಲ್ ಆಗುತ್ತಿದೆ.ಸೋಷಿಯಲ್ ಮೀಡಿಯಾದಲ್ಲಿ ತುಂಬಾನೇ ಆಕ್ವಿವ್ ಆಗಿರುವ ಉದ್ಯಮಿ ಆನಂದ್ ಮಹೀಂದ್ರಾ ಪ್ರತಿನಿತ್ಯ ಇಂಟರೆಸ್ಟಿಂಗ್ ಪೋಸ್ಟ್, ವಿಡಿಯೋಗಳನ್ನು ಶೇರ್ ಮಾಡುತ್ತಿರುತ್ತಾರೆ. ಇದೀಗ ಇವರು ಕೊಹ್ಲಿ ಶತಕವನ್ನು ಶ್ಲಾಘಿಸಿದ್ದು, ಈ ಕುರಿತ ಪೋಸ್ಟ್ ವೈರಲ್ ಆಗುತ್ತಿದೆ.
