ಬೆಂಗಳೂರು: ಕೆಪಿಎಸ್ಸಿ (ಕರ್ನಾಟಕ ಲೋಕ ಸೇವಾ ಆಯೋಗ) ಪರೀಕ್ಷೆಯಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಮತ್ತು ಕನ್ನಡ ಮೀಡಿಯಂ ದವರಿಗೆ ಅನ್ಯಾಯವಾಗುತ್ತಿದೆ ಎಂಬ ಕಾರಣದಿಂದ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಪ್ರತಿಭಟನೆಗೆ ಮುನ್ನೆಲೆಗೆ ಬಂದಿದೆ. ಕರವೇ ಮತ್ತು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ.
ಈ ಪ್ರತಿಭಟನೆಯ ಹಿನ್ನಲೆಯಲ್ಲಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡಲು ಒಟ್ಟು 250 ಕ್ಕೂ ಹೆಚ್ಚು ಪೊಲೀಸರು ನಿಯೋಜಿಸಲ್ಪಟ್ಟಿದ್ದಾರೆ. ವಾಹನ ಸಂಚಾರಕ್ಕೆ ಯಾವುದೇ ತೊಂದರೆಯಾಗದಂತೆ ಸುಮಾರು 80 ಕ್ಕೂ ಹೆಚ್ಚು ಟ್ರಾಫಿಕ್ ಪೊಲೀಸರು ಜವಾಬ್ದಾರಿ ವಹಿಸಿದ್ದಾರೆ.
ಆಯಾ ಸ್ಥಳದಲ್ಲಿ ಏನು ಅನಾಹುತ ಆಗದಂತೆ ಕ್ರಮ ವಹಿಸಲು ಸ್ಥಳೀಯ ಪೊಲೀಸ್ ಠಾಣೆಗಳ ಇಂದ ಸುಮಾರು 150 ಕ್ಕೂ ಹೆಚ್ಚು ಪೊಲೀಸರು ನೇಮಕಗೊಂಡಿದ್ದಾರೆ.