
Ashwaveega News 24×7 ಅ. 21: ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಫೇಸ್ಬುಕ್ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದ ತಿಮರೋಡಿ ಬಿಎಲ್ ಸಂತೋಷ್ ವಿರುದ್ಧ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಕುರಿತು ರಾಜೀವ್ ಕುಲಾಲ್ ಅವರು ನೀಡಿದ ದೂರಿನ ಮೇರೆಗೆ ಬ್ರಹ್ಮಾವರ ಠಾಣೆಯಲ್ಲಿ BSN 196 (1), 352, 353 (2) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಭಾರೀ ಹೈಡ್ರಾಮಾದ ಬಳಿಕ ಪೊಲೀಸರು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 8 ವಾಹನಗಳಲ್ಲಿ ತಿಮರೋಡಿ ನಿವಾಸಕ್ಕೆ ತೆರಳಿದ್ದ ಸುಮಾರು 30 ಪೊಲೀಸರ ತಂಡ ಉಜಿರಿಯಲ್ಲಿರುವ ಅವರ ಮನೆಯಲ್ಲೇ ವಶಕ್ಕೆ ಪಡೆದಿದೆ.
ಇದಕ್ಕೂ ಮುನ್ನ ಮನೆಯ ಮುಂಭಾಗ ದೊಡ್ಡಮಟ್ಟದಲ್ಲಿ ಜಮಾಯಿಸಿದ್ದ ತಿಮರೋಡಿ ಬೆಂಬಲಿಗರು ಬಂಧಿಸದಂತೆ ಆಗ್ರಹಿಸಿದರು. ಏನೇ ವಿಚಾರಣೆ ಇದ್ದರೂ ಇಲ್ಲೇ ನಡೆಸಿ ಎಂದು ಪಟ್ಟು ಹಿಡಿದರು. ಗಿರೀಶ್ ಮಟ್ಟಣ್ಣನವರ್ ಕೂಡ ಕಾರಣ ಕೇಳಿ ಪೊಲೀಸರೊಂದಿಗೆ ವಾಗ್ದಾದ ನಡೆಸಿದರು.
ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಬೆಂಬಲಿಗರೊಂದಿಗೆ ಮಾತುಕತೆ ನಡೆಸಿದ ಪೊಲೀಸರು ತಿಮರೋಡಿಯನ್ನ ವಶಕ್ಕೆ ಪಡೆದು ಖಾಸಗಿ ಕಾರಿನಲ್ಲಿ ಕರೆದೊಯ್ದಿದ್ದಾರೆ.
LIVE: Mahesh Shetty Thimarody Interview On Dharmasthala Issue | “ನೇರಾ-ನೇರ” ಮಹೇಶ್ ಶೆಟ್ಟಿ ತಿಮರೋಡಿ