ದೇವನಹಳ್ಳಿ: ಇಂದು ಆಹಾರ ಸಚಿವ ಕೆಹೆಚ್ ಮುನಿಯಪ್ಪ ರಾಗಿ ಖರೀದಿ ನೊಂದಣಿಗೆ ಮುನಿಯಪ್ಪ ಚಾಲನೆ ನೀಡಿದ್ರು . 2024-25 ನೇ ಸಾಲಿನ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿಸಲು , ದೇವನಹಳ್ಳಿ ಟೌನ್ ನ ವಿಜಯಪುರ ರಸ್ತೆಯಲ್ಲಿರುವ ಸರ್ಕಾರಿ ಉಗ್ರಾಣದಲ್ಲಿ ರಾಗಿ ಖರೀದಿ ಕೇಂದ್ರ ತೆರಯಲಾಯಿತು .
ಪ್ರತಿ ಕ್ವಿಂಟಾಲ್ ರಾಗಿಗೆ ರೂ. 4290 ರೂಪಾಯಿ ನಿಗದಿಪಡಿಸಲಾಗಿದೆ. ಪ್ರತಿ ರೈತರಿಂದ ಒಂದು ಎಕರೆಗೆ 10.00 ಕ್ವಿಂಟಾಲ್ ನಂತೆ ಗರಿಷ್ಠ 20.00 ಕ್ವಿಂಟಾಲ್ಗಳನ್ನು ಮೀರದಂತೆ ಹಾಗೂ FAQ ಮಾನದಂಡಗಳಂತೆ ಉತ್ತಮ ಗುಣಮಟ್ಟದ ರಾಗಿಯನ್ನು ಮಾತ್ರ ಖರೀದಿಸಲಾಗುವುದು.