
ರಾಜಕೀಯದಲ್ಲಿ ಜಟಾಪಟಿಗೆ ಕಾರಣವಾಗಿರುವ ಮುಸ್ಲಿಂರಿಗೆ 4% ಮೀಸಲಾತಿ ವಿಚಾರ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ. ಸದನದದಲ್ಲಿ ಉಭಯ ಪಕ್ಷದ ನಾಯಕರು ವಾದ ಪ್ರತಿವಾದ ನಡೆಸುತ್ತಿದ್ದಂತೆ ಮಹತ್ವದ ಬೆಳವಣಿಗೆ ಎಂಬಂತೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ. ಮುಸ್ಲಿಂ ಗುತ್ತಿಗೆದಾರರಿಗೆ ಶೇ.4ರಷ್ಟು ಮೀಸಲಾತಿ ನೀಡುವ ವಿಧೇಯಕದ ವಿರುದ್ದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯಪಾಲರಿಗೆ ಪತ್ರ ಬರೆಯುವ ಮೂಲಕ ಮನವಿ ಮಾಡಿದ್ದಾರೆ. ಈ ವಿವಾದಾತ್ಮಕ ವಿಧೇಯಕಗೆ ಒಪ್ಪಿಗೆ ನೀಡದಂತೆ ಮನವಿ ಮಾಡಿದ್ದಾರೆ. ಕಾನೂನು ಸಚಿವ ಹೆಚ್,ಕೆ ಪಾಟೀಲ್ ಅವರು ಕರ್ನಾಟಕ ಸಾರ್ವಜನಿಕ ಸಂಗ್ರಹಣೆ ಪಾರದರ್ಶಕತೆ ಅಧಿನಿಯಮ ವಿಧೇಯಕ 2025ರನ್ನು ವಿಧಾನಸಭೆಯಲ್ಲಿ ಮಂಡಿಸಿದ್ದಾರೆ.

ಅಭಿಷೇಕ್.ಎಸ್