Ashwaveega News 24×7 ಫೆಬ್ರವರಿ 23 – 2026 ಬೆಂಗಳೂರು : ರಾಜ್ಯದಲ್ಲಿ ಶಾಲಾ–ಕಾಲೇಜುಗಳಲ್ಲಿ ಮೊಬೈಲ್ ಫೋನ್ ಬಳಕೆ ಮೇಲೆ ನಿರ್ಬಂಧ ಹೇರಲು ಸರ್ಕಾರ ಚಿಂತನೆ ನಡೆಸುತ್ತಿರುವ ಸೂಚನೆಗಳು ಸಿಕ್ಕಿವೆ . ಮುಖ್ಯಮಂತ್ರಿ Siddaramaiah ನಂತರ ಇದೀಗ ಗೃಹ ಸಚಿವ G. Parameshwara ಕೂಡ ಮೊಬೈಲ್ ಬಳಕೆ ಕುರಿತು ಮಹತ್ವದ ಹೇಳಿಕೆ ನೀಡಿದ್ದಾರೆ .
ಬೆಂಗಳೂರಿನಲ್ಲಿ ಮಾತನಾಡಿದ ಡಾ. ಜಿ. ಪರಮೇಶ್ವರ್, “16 ವರ್ಷದೊಳಗಿನ ಮಕ್ಕಳಿಗೆ ಮೊಬೈಲ್ ಕೊಟ್ಟರೆ ಅವರು ಡೈವರ್ಟ್ ಆಗುತ್ತಾರೆ. ವಿದ್ಯಾಭ್ಯಾಸದ ಮೇಲೆ ಪರಿಣಾಮ ಬೀರುತ್ತದೆ ಎಂಬ ವರದಿಗಳು ನಮ್ಮ ಗಮನಕ್ಕೆ ಬಂದಿವೆ . ಮಕ್ಕಳು ಓದಿನ ಕಡೆ ಕಡಿಮೆ ಗಮನ ಕೊಡುತ್ತಿದ್ದಾರೆ. ಈ ವಯಸ್ಸಿನಲ್ಲಿ ಅತಿಯಾದ ಮೊಬೈಲ್ ಬಳಕೆ ಸರಿಯಲ್ಲ” ಎಂದು ಹೇಳಿದರು .
ಮಕ್ಕಳ ಮೊಬೈಲ್ ಬಳಕೆ ನಿಯಂತ್ರಣದ ಬಗ್ಗೆ ಸರ್ಕಾರ ಗಂಭೀರ ಚಿಂತನೆ ನಡೆಸುತ್ತಿದೆ. ಹಲವು ದೇಶಗಳಲ್ಲಿ ಶಾಲಾ ಪರಿಸರದಲ್ಲಿ ಮೊಬೈಲ್ ಬ್ಯಾನ್ ಮಾಡಿರುವುದನ್ನು ಉಲ್ಲೇಖಿಸಿದ ಸಚಿವರು , “ನಾವು ಕೂಡ ಆ ಮಾದರಿಗಳನ್ನು ಅಧ್ಯಯನ ಮಾಡುತ್ತಿದ್ದೇವೆ” ಎಂದು ತಿಳಿಸಿದ್ದಾರೆ .
ಇದೇ ವೇಳೆ ಅಂತಿಮ ತೀರ್ಮಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಕೈಗೊಳ್ಳಲಿದ್ದಾರೆ. ಸಾಧಕ –ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಶಿಕ್ಷಣ ತಜ್ಞರು ಮತ್ತು ಪಾಲಕರ ಅಭಿಪ್ರಾಯ ಪಡೆದು ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ .
ಶಾಲಾ–ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಜಾರಿಯಾಗುತ್ತದೆಯೇ ? 16 ವರ್ಷದೊಳಗಿನ ಮಕ್ಕಳಿಗೆ ಫೋನ್ ಬಳಕೆಗೆ ಬ್ರೇಕ್ ಬೀಳುತ್ತದೆಯೇ ? ಎಂಬ ಕುತೂಹಲ ಹೆಚ್ಚಾಗಿದೆ. ಸರ್ಕಾರದ ಅಧಿಕೃತ ಘೋಷಣೆಗೆ ಶಿಕ್ಷಣ ವಲಯ ಕಾತರದಿಂದ ಕಾಯುತ್ತಿದೆ .
