
ಕಲಬುರಗಿ : ಜಿಲ್ಲೆಯ ಸೇಡಂ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಮೋಟರ್ ಸೈಕಲ್ ಕಳ್ಳತನವಾಗಿದ್ದು,ಇಬ್ಬರು ಕಳ್ಳರನ್ನು ಬಂಧಿಸಿದ್ದಾರೆ.
ಹೌದು ಕಲಬುರಗಿ ಜಿಲ್ಲೆಯ ಸೇಡಂ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಮೋಟರ್ ಸೈಕಲ್ ಕಳ್ಳತನ ಪ್ರಕರಣದಲ್ಲಿ ಪೊಲೀಸರು ಇಬ್ಬರು ಕಳ್ಳರನ್ನು ಬಂಧಿಸಿದ್ದು, ಬಂಧಿತರಿಂದ ಅ ಕಿ , 3, 50, 000/- ರೂಪಾಯಿ ಮೌಲ್ಯದ 10 ಮೋಟರ್ ಸೈಕಲ್ ಗಳನ್ನು ವಶಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲಾದೆ ಆರೋಪಿತರನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಕೊಡುವಲ್ಲಿ ಯಶಸ್ವಿಯಾಗಿದ್ದು, ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಕಲಬುರಗಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅದ್ದೂರು ಶ್ರೀನಿವಾಸಲು ರವರು ಶ್ಲಾಘಿಸಿದ್ದಾರೆ.