ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದೆ. ದಸರಾ ಹಬ್ಬದ ಪ್ರಮುಖ ಆಕರ್ಷಣೆಗಳಲ್ಲಿ ಒಂದಾದ ಗಜಪಯಣಕ್ಕೆ ವೀರನಹೊಸಳ್ಳಿ ಗ್ರಾಮದಲ್ಲಿ ಚಾಲನೆ ನೀಡಲಾಗಿದೆ. ಮೈಸೂರು ಅರಮನೆ ಆವರಣದಲ್ಲಿ ದಸರಾ ಗಜಪಡೆ ವಾಸ್ತವ್ಯದ ಸಕಲ ಸಿದ್ಧತೆಗಳು ಭರದಿಂದ ಸಾಗುತ್ತಿವೆ.
ಗಜಪಡೆಯ ವಾಸ್ತವ್ಯದ ಸ್ಥಳದಲ್ಲಿ ತಾತ್ಕಾಲಿಕ ಶೆಡ್ಗಳು ನಿರ್ಮಿಸಲಾಗಿದ್ದು, ಮಾವುತರು ಮತ್ತು ಕಾವಾಡಿಗಳ ಕುಟುಂಬ ವರ್ಗಕ್ಕೂ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ. ದಸರಾ ಆನೆಗಳಿಗೆ ಆಹಾರ ತಯಾರಿಸಲು ಹಾಗೂ ದಾಸ್ತಾನು ಇಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ.
ಗಜಪಡೆ ವಾಸ್ತವ್ಯದ ಸ್ಥಳದಲ್ಲಿ ಸ್ವಚ್ಛತೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಬೆಳೆಯುವ ಗಿಡ ಗಂಟಿಗಳನ್ನು ಕತ್ತರಿಸುವುದು, ರಾಶಿ ಬಿದ್ದಿದ್ದ ಕಸವನ್ನು ತೆರವುಗೊಳಿಸುವುದು ಸೇರಿದಂತೆ ವಿವಿಧ ಸಿದ್ಧತಾ ಕಾರ್ಯಗಳು ಮುಂದುವರಿದಿವೆ.
ದಸರಾ ಚಟುವಟಿಕೆಗಳ ಕೇಂದ್ರ ಬಿಂದು ಆಗಿರುವ ಮೈಸೂರು ಅರಮನೆ ಆವರಣದಲ್ಲಿ, ಗಜಪಡೆಯ ರಜಾತಿತ್ಯಕ್ಕಾಗಿ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ನಾಳೆ, ದಸರಾ ಗಜಪಡೆ ಸಾಂಪ್ರದಾಯಿಕ ಪೂಜೆಯೊಂದಿಗೆ ಅಂಬಾವಿಲಾಸ ಅರಮನೆ ಆವರಣ ತಲುಪಲಿದೆ.