
mysuru three nursing students drown during trip
Ashwaveega News 24×7 ಜು. 20: ಮೈಸೂರಿನಲ್ಲಿ ಘೋರ ದುರಂತ ನಡೆದಿದೆ. ಕೆಆರ್ಎಸ್ ಹಿನ್ನೀರಿನಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.
ಮೈಸೂರು ತಾಲೂಕಿನ ಮೀನಾಕ್ಷಿಪುರ ಬಳಿ ಘಟನೆ ನಡೆದಿದೆ. ಮಂಡ್ಯದ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.
ಪ್ರವಾಸಕ್ಕೆ ಹೋಗಿದ್ದ ವೇಳೆ ಪ್ರಶಾಂತ್, ಸಿದ್ಧ ಮತ್ತು ಕೃಷ್ಣ ಎನ್ನುವ ಮೂವರು ವಿದ್ಯಾರ್ಥಿಗಳು ನೀರು ಪಾಲಾಗಿದ್ದಾರೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ತೆರಳಿ ಮೂವರು ವಿದ್ಯಾರ್ಥಿಗಳಿಗಾಗಿ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಘಟನೆ ಕುರಿತಂತೆ ಇಲವಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.