Ashwaveega News 24×7 ಜನವರಿ 12 : BMRCL – ಸಿಲಿಕಾನ್ ಸಿಟಿಯ ಜನಜೀವನದ ಒಂದು ಅಂಗವಾಗಿರುವ ‘ನಮ್ಮ ಮೆಟ್ರೋ’ ಪ್ರಯಾಣ ಇನ್ನು ಮುಂದೆ ಮತ್ತಷ್ಟು ದುಬಾರಿಯಾಗಲಿದೆ. ದರ ನಿಗದಿ ಸಮಿತಿ (FFC) ಶಿಫಾರಸಿನ ಮೇರೆಗೆ ಬೆಂಗಳೂರು ಮೆಟ್ರೋ ರೈಲು ನಿಗಮವು (BMRCL) ಬರುವ ಫೆಬ್ರವರಿ 2026 ರಿಂದ ಜಾರಿಗೆ ಬರುವಂತೆ ಟಿಕೆಟ್ ದರವನ್ನು ಶೇಕಡಾ 5 ರಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿದೆ.
ಬೆಂಗಳೂರಿನ ಜೀವನಾಡಿ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿರುವುದು ಸಾರ್ವಜನಿಕರಿಗೆ ಬಿಗ್ ಶಾಕ್ ಕೊಟ್ಟಿತ್ತು. ಫೆಬ್ರವರಿ 9 ರಿಂದಲೇ ಪರಿಷ್ಕೃತ ದರ ಜಾರಿಗೆ ಬಂದಿದ್ದು, ಪ್ರಯಾಣಿಕರ ಜೇಬಿಗೆ ನಮ್ಮ ಮೆಟ್ರೋ ಬರೆ ಎಳೆದಿದೆ. ಭಾರಿ ಪ್ರಮಾಣದಲ್ಲಿ ದರ ಏರಿಕೆ ಮಾಡಿದ್ದು ಕೂಡ ಆಕ್ರೋಶಕ್ಕೆ ಕಾರಣವಾಗಿತ್ತು.
ದರ ಏರಿಕೆ ಮಾಡಿದ್ದ ಮೆಟ್ರೋಗೆ ಈಗ ಸಾರ್ವಜನಿಕರು ಬಿಗ್ ಶಾಕ್ ಕೊಟ್ಟಿದ್ದಾರೆ. ಬೆಲೆ ಏರಿಕೆಯಿಂದಾಗಿ ಪ್ರಯಾಣಿಕರೇ ಮೆಟ್ರೋ ಕಡೆ ಮುಖ ಮಾಡದೆ ಪರ್ಯಾಯ ಮಾರ್ಗ ಕಂಡುಕೊಂಡಿರುವಂತಿದೆ. ಯಾಕೆಂದರೆ ಒಂದೇ ದಿನದಲ್ಲಿ ಬರೋಬ್ಬರಿ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತವಾಗಿದೆ.
ಭಾರೀ ಪ್ರಮಾಣದಲ್ಲಿ ದರ ಏರಿಕೆ ಮಾಡಿದ್ದ ನಮ್ಮ ಮೆಟ್ರೋಗೆ ಇದು ಆಘಾತ ತರಿಸಿದೆ. ದರ ಏರಿಕೆ ಆದಾಗಲೇ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದರು. ಇಷ್ಟೊಂದು ಪ್ರಮಾಣದಲ್ಲಿ ಹೆಚ್ಚಳ ಮಾಡುವ ಅವಶ್ಯಕತೆ ಇರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಸದ್ಯ ಪ್ರಯಾಣಿಕರ ಈ ಅಸಮಾಧಾನದ ಬಿಸಿ ಮೆಟ್ರೋಗೆ ತಟ್ಟಿದೆ.
