ಬೆಂಗಳೂರು:
ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆಯ ಅಂಗವಾಗಿ ಅರಣ್ಯ ಭವನದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಯಿತು. ಅರಣ್ಯ ಇಲಾಖೆಯ ಹುತಾತ್ಮರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಮಿಸಿದರು.
ಅರಣ್ಯ ಇಲಾಖೆದಿಂದ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ, ಮುಖ್ಯಮಂತ್ರಿಗಳು ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದರು ಮತ್ತು ಅರಣ್ಯ ಮತ್ತು ವನ್ಯಜೀವಿ ಸಂರಕ್ಷಣೆಯಲ್ಲಿ ಪ್ರಾಣತ್ಯಾಗ ಮಾಡಿದ ಸಿಬ್ಬಂದಿಗಳಿಗೆ ಗೌರವ ಸಲ್ಲಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮಕ್ಕೆ ಎರಡು ಗಂಟೆ ತಡವಾಗಿ ಆಗಮಿಸಿದರು, ಅವರೊಂದಿಗೆ ಅರಣ್ಯ ಸಚಿವ ಈಶ್ವರ ಖಂಡ್ರೆ ಮತ್ತು ಹಲವು ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.