Ashwaveega News 24×7 ಜನವರಿ 24 – ರಾತ್ರಿ ಹೊತ್ತಿನಲ್ಲಿ ಬಿಡಿ, ಹಗಲಿನಲ್ಲಿ ಹೆಣ್ಣು ಮಕ್ಕಳು ಓಡಾಡುವುದು ಕಷ್ಟ. ಹೀಗಿರುವಾಗ ನಗರದಲ್ಲಿ ಮಧ್ಯರಾತ್ರಿ ವೇಳೆ ಯುವತಿಯರ ಮೇಲಿನ ಕಿರುಕುಳ ಪ್ರಕರಣಗಳು ಹೆಚ್ಚುತ್ತಿದ್ದು, ಮತ್ತೊಂದು ಘಟನೆ ಮಡಿವಾಳ ಠಾಣಾ ವ್ಯಾಪ್ತಿಯ ಮಾರುತಿನಗರದಲ್ಲಿ ನಡೆದಿದೆ.
ರಸ್ತೆಯಲ್ಲಿ ತನ್ನ ಸ್ನೇಹಿತನ ಜೊತೆ ನಿಂತಿದ್ದ ಯುವತಿಗೆ ಕೆಲ ಪುಂಡರು ಲೈಂಗಿಕವಾಗಿ ಕಿರುಕುಳ ನೀಡಿರುವ ಆರೋಪ ಕೇಳಿಬಂದಿದೆ . ಮಾಹಿತಿ ಪ್ರಕಾರ, ಸಮೀಪದ ಮನೆಯೊಂದರಲ್ಲಿ ಪಾರ್ಟಿ ಮಾಡುತ್ತಿದ್ದ ಕೆಲ ಯುವಕರು ಸಿಗರೇಟ್ ತರಲು ಹೊರಗೆ ಬಂದಿದ್ದರು.
ಈ ವೇಳೆ ರಸ್ತೆಯಲ್ಲಿ ನಿಂತಿದ್ದ ಯುವತಿಯನ್ನು ನೋಡಿ ಟೀಸ್ ಮಾಡಿದ ಪುಂಡರಿಗೆ , ಪ್ರಶ್ನಿಸಿದ ಯುವತಿಯ ಸ್ನೇಹಿತನ ಮೇಲೆ ಹಲ್ಲೆ ನಡೆಸಿದ್ದಾರೆ… ಗಲಾಟೆ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ.
ಘಟನೆಯ ಮಾಹಿತಿ ಪಡೆದ ಮಡಿವಾಳ ಪೊಲೀಸರು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ, ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರನ್ನು ವಿಜಯ್, ಡೇವಿಡ್, ತೇಜಸ್ವಿ ಹಾಗೂ ಮೋಹಿತ್ ಎಂದು ಗುರುತಿಸಲಾಗಿದೆ. ಸದ್ಯ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
