
ಬೆಂಗಳೂರು : ಚನ್ನಪಟ್ಟಣ ಉಪಚುನಾವಣೆ ರಾಜ್ಯ ರಾಜಕೀಯದಲ್ಲಿ ಹೈವೋಲ್ಟೇಜ್ ಎಲೆಕ್ಷನ್ಗೆ ಸಾಕ್ಷಿಯಾಗಿದ್ದು, ಬಿಜೆಪಿ ಬಿಟ್ಟು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ ಸಿ.ಪಿ ಯೋಗೇಶ್ವರ್ ಚನ್ನಪಟ್ಟಣದಲ್ಲಿ ಸಿ.ಪಿ ಯೋಗೇಶ್ವರ್ ಅವರಿಗೆ ಎದುರಾಳಿ ಯಾರು ಅನ್ನೋ ಗೊಂದಲಕ್ಕೆ ತೆರೆ ಬಿದ್ದಿದ್ದ, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯುವುದು ಬಹುತೇಕ ಫಿಕ್ಸ್ ಆಗಿದೆ.
ಇನ್ನೂ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರೇ ಕಣಕ್ಕಿಳಿಯಬೆಕೆಂದು ಜೆಡಿಎಸ್ ವರಿಷ್ಠರು ಕಾರ್ಯಕರ್ತರ ಒತ್ತಡಕ್ಕೆ ಮಣಿದು ಮತ್ತೆ ನಿಖಿಲ್ ಅವರನ್ನ ಅಗ್ನಿಪರೀಕ್ಷೆಯ ಕಣಕ್ಕಿಳಿಸಲು ರೆಡಿಯಾಗಿದ್ದಾರೆ ಎನ್ನಲಾಗಿದೆ.ಜೆಡಿಎಸ್ ಕಚೇರಿಯಲ್ಲಿ ಇಂದು ಚನ್ನಪಟ್ಟಣ ಅಭ್ಯರ್ಥಿ ಆಯ್ಕೆ ಮಾಡಲು ಕಾರ್ಯಕರ್ತರ ಸಭೆ ಕರೆಯಲಾಗಿದ್ದು, ಈ ಸಭೆಯಲ್ಲಿ ಕಾರ್ಯಕರ್ತರು ನಿಖಿಲ್ ಅವರೇ ಅಭ್ಯರ್ಥಿ ಆಗಬೇಕು ಅನ್ನೋ ಒತ್ತಾಯ ಮಾಡಿದ್ದಾರೆ.
ಈ ಸಭೆಯಲ್ಲಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು ಚುನಾವಣೆಗೆ ಸ್ಪರ್ಧಿಸಲು ನಾನು ರೆಡಿ ಇದ್ದೇನೆ ಎಂದು ಘೋಷಣೆ ಮಾಡಿದ್ದು, ಖುದ್ದು ನಿಖಿಲ್ ಅವರ ಈ ಮಾತಿನಿಂದ ಚನ್ನಪಟ್ಟಣ ಉಪಚುನಾವಣೆಗೆ ಸ್ಪರ್ಧಿಸುವುದು ಫಿಕ್ಸ್ ಎನ್ನಲಾಗಿದೆ. ಚನ್ನಪಟ್ಟಣದಲ್ಲಿ NDA ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಅವರು ಕಣಕ್ಕಿಳಿಯೋ ಲೆಕ್ಕಾಚಾರ ಅಂತಿಮವಾಗಿದೆ. ಅಧಿಕೃತವಾಗಿ ಘೋಷಣೆ ಮಾಡುವುದು ಮಾತ್ರವೇ ಬಾಕಿ ಉಳಿದಿದೆ. ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ತುರ್ತು ಸುದ್ದಿಗೋಷ್ಟಿ ನಡೆಸಿ ಈ ಬಗ್ಗೆ ಅಧಿಕೃತ ಘೋಷಣೆಗೆ ನಿರ್ಧಾರ ಮಾಡಿದ್ದಾರೆ.