
ಬೆಂಗಳೂರು : ಶಾಸಕ ಬಸನಗೌಡ ಯತ್ನಾಳ್ಗೆ 24ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದ್ದು, ಯತ್ನಾಳ್ ವಿರುದ್ಧ ದಿನೇಶ್ಗುಂಡೂರಾವ್ ಪತ್ನಿ ಟಬು ರಾವ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದಾರೆ.
ದಿನೇಶ್ ಗುಂಡೂರಾವ್ ಕುಟುಂಬದ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಯತ್ನಾಳ್ ವಿರುದ್ಧ ದಿನೇಶ್ಗುಂಡೂರಾವ್ ಪತ್ನಿ ಟಬು ರಾವ್ ಮಾನನಷ್ಟ ಮೊಕದ್ದಮೆ ಕೇಸ್ ದಾಖಲಿಸಿದ್ದು, ಟಬಸ್ಸುಮ್ ರಾವ್ ಸಲ್ಲಿಸಿದ್ದ ಖಾಸಗಿ ದೂರನ್ನು ಆಗಸ್ಟ್ 29 ರಂದು ಪುರಸ್ಕರಿಸಿದ್ದ ಕೋರ್ಟ್ ಅ.16 ರಂದು ವಿಚಾರಣೆಗೆ ಖುದ್ದು ಹಾಜರಾಗುವಂತೆ ಯತ್ನಾಳ್ಗೆ ಸಮನ್ಸ್ ಜಾರಿಗೊಳಿಸಿತ್ತು. ಆದರೆ ಯತ್ನಾಳ್ ವಿಚಾರಣೆಗೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಜಾರಿಗೊಳಿಸಿ ಮುಂದಿನ ವಿಚಾರಣೆಯನ್ನು ಅಕ್ಟೋಬರ್ 28ಕ್ಕೆ ಮುಂದೂಡಿದೆ.
ಇದನ್ನೂ ಓದಿ : https://ashwaveega.com/in-hassan-district-a-forester-died-after-being-touched-by-electricity/