

ಇದೇ ತಿಂಗಳ ಜ,31ರಿಂದ ಸಂಸತ್ ಅಧಿವೇಶನ ಪ್ರಾರಂಭವಾಗಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮುರವರು ಉಭಯ ಸದನಗಳ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಿದ ನಂತರ ಬಜೆಟ್ ಅಧಿವೇಶನ ಶುರುವಾಗಲಿದೆ. 2025ನೇ ಸಾಲಿನ ಕೇಂದ್ರ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್ ಆಗಿದ್ದು ಈ ಬಾರಿಯ ಬಜೆಟ್ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ರವರು ಫೆಬ್ರವರಿ 1 ರಂದು ಸತತ 8ನೇ ಬಾರಿಗೆ ಬಜೆಟ್ ಮಂಡಿಸಲು ಸಜ್ಜಾಗಿದ್ದಾರೆ. ಮೂರನೇ ಬಾರಿಗೆ ಪ್ರಧಾನಿ ಮೋದಿ ಸರ್ಕಾರ ಬಂದ ನಂತರ ಮಂಡನೆಯಾಗುತ್ತಿರುವ ಮೊದಲ ಬಜೆಟ್ ಇದ್ದಾಗಿದ್ದು ಜನ ಸಾಮಾನ್ಯರ ನಿರೀಕ್ಷೆಗಳು ಹೆಚ್ಚಿವೆ.