Ashwaveega News 24×7 ಜನವರಿ 17 – ಮೈಸೂರು : ಬಳ್ಳಾರಿಯ ನಂತರ ಮೈಸೂರಿನಲ್ಲೂ ಬ್ಯಾನರ್ ಹಾಗೂ ಫ್ಲೆಕ್ಸ್ ತೆರವು ವಿಚಾರವಾಗಿ ರಾಜಕೀಯ ಗಲಾಟೆ ಆಗಿದೆ. ಮೈಸೂರಿನ ಕೆ.ಆರ್ ನಗರ ವಿಧಾನಸಭಾ ಕ್ಷೇತ್ರದ ಕೆಸ್ತೂರು ಕೊಪ್ಪಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಕಾಂಗ್ರೆಸ್ ಶಾಸಕ ರವಿಶಂಕರ್ ಅವರ ಹುಟ್ಟೂರಿನಲ್ಲೇ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.
ಗ್ರಾಮದಲ್ಲಿ ಅಳವಡಿಸಲಾಗಿದ್ದ ಜೆಡಿಎಸ್ ನಾಯಕರ ಫ್ಲೆಕ್ಸ್ಗಳನ್ನು ತೆರವುಗೊಳಿಸಲಾಗಿದೆ. ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಾರಾ ಮಹೇಶ್ ಅವರ ಫ್ಲೆಕ್ಸ್ಗಳನ್ನು ತೆಗೆದುಹಾಕಲಾಗಿದೆ ಎಂದು ಆರೋಪಿಸಲಾಗಿದೆ. ಫ್ಲೆಕ್ಸ್ ತೆರವುಗೊಳಿಸುವುದನ್ನು ತಡೆಯಲು ಬಂದ ಜೆಡಿಎಸ್ ಕಾರ್ಯಕರ್ತರಿಗೆ ಬೆದರಿಕೆ ಹಾಕಲಾಗಿದೆ ಎನ್ನಲಾಗಿದೆ.
“ನಮ್ಮ ರವಿ ಅಣ್ಣ, ಸ್ವಾಮಿ ಗೌಡ್ರು ಅವರ ಫ್ಲೆಕ್ಸ್ ಮಾತ್ರ ಇರಬೇಕು” ಎಂದು ಹೇಳಿ, ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಫ್ಲೆಕ್ಸ್ಗಳನ್ನು ತೆರವುಗೊಳಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಜೆಡಿಎಸ್ ಪಾಳಯ ಆರೋಪಿಸಿದೆ.
ಜೆಡಿಎಸ್ ಕಾರ್ಯಕರ್ತರು ಕೆ.ಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪ್ರಕರಣದ ತನಿಖೆ ನಡೆಯುತ್ತಿದೆ. ಘಟನೆ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದೆ …
