
prajwal revanna bail plea high court
(ಅಶ್ವವೇಗ) Ashwaveega News 24×7 ಜು.09: ಹಾಸನದ ಹೊಳೆನರಸೀಪುರದ ಮನೆಕೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ( ಜಾಮೀನು ಕೋರಿ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರಜ್ವಲ್ ರೇವಣ್ಣ ಅರ್ಜಿಯನ್ನು ಇತ್ಯರ್ಥಗೊಳಿಸಿದೆ.
ಮನೆ ಕೆಲಸದಾಕೆ ನೀಡಿದ್ದ ಅತ್ಯಾಚಾರದ ದೂರಿನ ಕೇಸ್ಗೆ ಸಂಬಂಧಿಸಿದಂತೆ, ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಪ್ರಜ್ವಲ್ ರೇವಣ್ಣ ಅರ್ಜಿ ಇತ್ಯರ್ಥಗೋಳಿಸಿದೆ. ವಿಚಾರಣಾಧೀನ ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಲು ಪ್ರಜ್ವಲ್ ರೇವಣ್ಣಗೆ ಅವಕಾಶ ನೀಡಿದೆ.
ಪ್ರಜ್ವಲ್ ರೇವಣ್ಣ ಸಲ್ಲಿಸುವ ಜಾಮೀನು ಅರ್ಜಿಯನ್ನು 10 ದಿನಗಳಲ್ಲಿ ನಿರ್ಧರಿಸಲು ವಿಚಾರಣಾಧೀನ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರಿದ್ದ ಪೀಠ ಆದೇಶ ಹೊರಡಿಸಿದೆ. ಜಾಮೀನು ಅರ್ಜಿ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ ಗೆ ಸಲ್ಲಿಸಿದ ಅರ್ಜಿಯನ್ನು ಕೊನೆಯಗೂ ನ್ಯಾಯಾಲಯ ಇರ್ತ್ಯರ್ಥಪಡಿಸಿದೆ.