
Ashwaveega News 24×7 ಅ. 02: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ಪ್ರಕಟಗೊಂಡಿದೆ. ಐಪಿಸಿ ಸೆಕ್ಷನ್ 376(2)(k) ಅತ್ಯಾ1ಚಾರ ಅಪರಾಧಕ್ಕೆ ಜೀವಾವಧಿ ಶಿಕ್ಷೆಯಾಗಿದೆ. ಈ ಮೂಲಕ ಜೀವನ ಪರ್ಯಂತ ಜೈಲಿನಲ್ಲೇ ಇರುವ ಶಿಕ್ಷೆ ಪ್ರಕಟವಾಗಿದೆ. 376(2)(n) ಸೆಕ್ಷನ್ ಗೆ ಜೀವಾವಧಿ. 354 ಗೆ 3 ವರ್ಷ, 354(b) 3 ವರ್ಷ ಕಠಿಣ ಕಾರಗೃಹ, . ಸಂತ್ರಸ್ತಗೆ 11ಲಕ್ಷ ಪರಿಹಾರ ನೀಡುವಂತೆ ಕೋರ್ಟ್ ಆದೇಶ ಹೊರಬಿದ್ದಿದೆ. ಈ ಮೂಲಕ ಪ್ರಜ್ವಲ್ ರೇವಣ್ಣಗೆ ಬಹುದೊಡ್ಡ ಶಿಕ್ಷೆಯಾಗಿದೆ.
ಕೆ ಆರ್ ನಗರದ ಮನೆಗೆಲಸದಾಕೆಯ ಮೇಲಿನ ಅತ್ಯಾ1ಚಾರ ಪ್ರಕರಣದ ವಿಚಾರಣೆ ನಡೆಸಿ ಶುಕ್ರವಾರ ದೋಷಿ ಎಂದು ಪ್ರಕಟಿಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಮಧ್ಯಾಹ್ನ ಶಿಕ್ಷೆ ಪ್ರಮಾಣವನ್ನು ಪ್ರಕಟಿಸಿದೆ. ನ್ಯಾಯಮೂರ್ತಿ ಗಜಾನನ ಭಟ್ ಅವರು ಈ ಆದೇಶ ಪ್ರಕಟಿಸಿದ್ದಾರೆ.
ಪ್ರಕರಣದಲ್ಲಿ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಮತ್ತು 376(2)(k) ಅಡಿಯಲ್ಲಿ ಆರೋಪಗಳು ದಾಖಲಾಗಿದೆ. ಈ ಕಲಂಗಳು ನಿರಂತರ ಅತ್ಯಾ1ಚಾರ ಮತ್ತು ನೌಕರಿ ಮಾಡುತ್ತಿರುವ ಮಹಿಳೆಯ ಮೇಲೆ ನಡೆದ ಅತ್ಯಾ1ಚಾರಕ್ಕೆ ಸಂಬಂಧಪಟ್ಟದ್ದಾಗಿದೆ. ಮೊದಲ ಪ್ರಕರಣದಲ್ಲಿ ಮಾತ್ರವೇ ಪ್ರಜ್ವಲ್ ವಿರುದ್ಧ ತೀರ್ಪು ಪ್ರಕಟಗೊಂಡಿದ್ದು, ಇನ್ನೂ ಮೂರು ಪ್ರಕರಣಗಳು ಇದೇ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದೆ.
ಇನ್ನು ಈ ಮೂರು ಪ್ರಕರಣದ ಒಂದು ಪ್ರಕರಣದಲ್ಲಿ ಪ್ರಜ್ವಲ್ ತಂದೆ ಮಾಜಿ ಸಚಿವ ಹೆಚ್ ಡಿ ರೇವಣ್ಣ ಮತ್ತು ತಾಯಿ ಭವಾನಿ ರೇವಣ್ಣ ವಿರುದ್ಧ ಕೂಡ ಆರೋಪ ಇದ್ದು, ಪ್ರಕರಣ ವಿಚಾರಣೆ ಹಂತದಲ್ಲಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ವಿರುದ್ಧವಾಗಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ. ಹೈಕೋರ್ಟ್ ಈ ತೀರ್ಪಿಗೆ ತಾತ್ಕಾಲಿಕ ತಡೆ ನೀಡಿದರೆ, ಉಳಿದ ಮೂರು ಪ್ರಕರಣಗಳಲ್ಲಿ ಜಾಮೀನಿಗಾಗಿ ಅವರು ಮುಂದಿನ ಕಾನೂನು ಹೋರಾಟ ನಡೆಸಬಹುದು.
ಆದರೆ ಹೈಕೋರ್ಟ್ ಕೂಡ ವಿಶೇಷ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದರೆ, ಆಗ ಪ್ರಜ್ವಲ್ ರೇವಣ್ಣಗೆ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸುವ ಮಾರ್ಗ ಮಾತ್ರ ಉಳಿಯುತ್ತದೆ. ಆದರೆ ಸುಪ್ರೀಂ ಕೋರ್ಟ್ ಕೂಡ ಹೈಕೋರ್ಟ್ ತೀರ್ಪನ್ನು ಸಮರ್ಥಿಸಿದರೆ, ಆಗ ಅವರು ವಿಧಿಸಲಾದ ಶಿಕ್ಷೆಯನ್ನು ಅನುಭವಿಸಲೇಬೇಕಾಗುತ್ತದೆ.