Ashwaveega News 24×7 ಡಿಸೆಂಬರ್. 03: ಅತ್ಯಾಚಾರ ಪ್ರಕರಣದಲ್ಲಿ ಜೈಲುಪಾಲಾಗಿರುವ ಆಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಆಘಾತ ಎದುರಾಗಿದೆ.
ಕೆಆರ್ ನಗರ ಮೂಲದ ಮನೆಗೆಲಸದ ಮಹಿಳೆಯ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.
ಇದನ್ನು ಪ್ರಶ್ನಿಸಿ ಪ್ರಜ್ವಲ್ ರೇವಣ್ಣ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಮೇಲ್ಮನವಿಯ ವಿಚಾರಣೆ ಸಂದರ್ಭದಲ್ಲಿ, ಶಿಕ್ಷೆ ಅಮಾನತ್ತಿನಲ್ಲಿಟ್ಟು ಜಾಮೀನು ನೀಡುವಂತೆ ಕೋರಿದ್ದ ಮಧ್ಯಂತರ ಅರ್ಜಿಯನ್ನು ಇಂದು ಹೈಕೋರ್ಟ್ ವಜಾಗೊಳಿಸಿದೆ.
ನ್ಯಾಯಮೂರ್ತಿಗಳಾದ ಕೆ.ಎಸ್. ಮುದಗಲ್ ಹಾಗೂ ಟಿ.ವೆಂಕಟೇಶ್ ನಾಯ್ಕ್ ಅವರಿದ್ದ ವಿಭಾಗೀಯ ಪೀಠವು ಮಹತ್ವದ ತೀರ್ಪನ್ನು ಪ್ರಕಟಿಸಿದ್ದು, ಪ್ರಜ್ವಲ್ ರೇವಣ್ಣಗೆ ಜೈಲು ವಾಸದಿಂದ ಸದ್ಯಕ್ಕೆ ಬಿಡುಗಡೆ ಭಾಗ್ಯ ದೊರೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಹೀಗಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಸದ್ಯಕ್ಕೆ ಜೈಲುವಾಸ ಮುಂದುವರಿಯಲಿದೆ.
