Ashwaveega News 24×7 – ಜನವರಿ 11 – ಗುಜರಾತ್: ಪ್ರಧಾನಿ ನರೇಂದ್ರ ಮೋದಿ (PM Narenrda Modi) ತಮ್ಮ ತವರು ರಾಜ್ಯ ಗುಜರಾತ್ಗೆ ಆಗಮಿಸಿದ್ದಾರೆ. ಈ ವೇಳೆ ಪ್ರಮುಖವಾಗಿ ಐತಿಹಾಸಿಕ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಲಿದ್ದು, ಈಗಾಗಲೇ ದೇಗುಲ ತಲುಪಿದ್ದಾರೆ. ಇಲ್ಲಿ ನಡೆಯುತ್ತಿರುವ ಪ್ರಮುಖ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಕಾರ್ಯಕ್ರಮವಾದ ಸೋಮನಾಥ ಸ್ವಾಭಿಮಾನ್ ಪರ್ವ್ (Somnath Swabhiman Parv) ಕಾರ್ಯಕ್ರಮಲ್ಲಿ ಭಾಗವಹಿಸಲಿದ್ದಾರೆ. ಇನ್ನು ಇಂದು ಸಂಜೆಯೇ ಆಗಮಿಸಿದ ಪ್ರಧಾನಿ, ಸೋಮನಾಥನಿಗೆ ವಿಶೇಷ ಪೂಜೆ ಸಲ್ಲಿಸಿದ್ರು. ಬಳಿಕ ಓಂಕಾರ ಪಠಣೆಯಲ್ಲಿ ಭಾಗಿಯಾದ್ರು.
ಜನವರಿ 10 ರಂದು, ಪ್ರಧಾನ ಮಂತ್ರಿಯವರು ರಾತ್ರಿ 8 ಗಂಟೆ ಸುಮಾರಿಗೆ ದೇವಾಲಯದಲ್ಲಿ ಓಂಕಾರ ಮಂತ್ರ ಪಠಣದಲ್ಲಿ ಭಾಗವಹಿಸಿದ್ರು. ಆಧ್ಯಾತ್ಮಿಕ ಕಾರ್ಯಕ್ರಮದ ನಂತರ ದೇವಾಲಯ ಸಂಕೀರ್ಣದಲ್ಲಿ ಡ್ರೋನ್ ಪ್ರದರ್ಶನ ನಡೆಯಲಿದ್ದು, ಈ ಸಂದರ್ಭಕ್ಕೆ ಒಂದು ದೃಶ್ಯ ಗೌರವವನ್ನು ನೀಡಲಿದ್ದಾರೆ. ನಾಳೆ ಬೆಳಿಗ್ಗೆ, ಜನವರಿ 11 ರಂದು, ಅವರು ಬೆಳಿಗ್ಗೆ 9:45 ರ ಸುಮಾರಿಗೆ ಶೌರ್ಯ ಯಾತ್ರೆಯಲ್ಲಿ ಸೇರಲಿದ್ದಾರೆ.
ಸೋಮನಾಥ ದೇವಾಲಯವನ್ನು ರಕ್ಷಿಸಲು ಪ್ರಾಣ ತ್ಯಾಗ ಮಾಡಿದ ಯೋಧರನ್ನು ಗೌರವಿಸುವ ಈ ವಿಧ್ಯುಕ್ತ ಮೆರವಣಿಗೆಯಲ್ಲಿ ಧೈರ್ಯ ಮತ್ತು ತ್ಯಾಗವನ್ನು ಪ್ರತಿನಿಧಿಸುವ 108 ಕುದುರೆಗಳ ಸಾಂಕೇತಿಕ ಮೆರವಣಿಗೆ ನಡೆಯಲಿದೆ. ನಂತರ, ಪ್ರಧಾನಮಂತ್ರಿಯವರು ದೇವಾಲಯದಲ್ಲಿ ದರ್ಶನ ಮತ್ತು ಪೂಜೆ ಸಲ್ಲಿಸಿ ಸೋಮನಾಥದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ಘಜ್ನಿಯಿಂದ ಔರಂಗಜೇಬನವರೆಗೆ ಸೋಮನಾಥ ದೇವಾಲಯದ ಮೇಲೆ ದಾಳಿ ಮಾಡಿದವರೆಲ್ಲಾ ಸಮಾಧಿಯಾದರು. ಆದರೆ ಸೋಮನಾಥ ಅದೆಲ್ಲವನ್ನೂ ನೋಡುತ್ತಾ ಅಲ್ಲೇ ನಿಂತಿದ್ದಾನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಅಲ್ಲದೇ, ಸ್ವಾತಂತ್ರ್ಯನಂತರದ ಸೋಮನಾಥ ದೇವಾಲಯದ ಇತಿಹಾಸವನ್ನು ಅಳಿಸಿಹಾಕಲು ಹಿಂದಿನ ಸರ್ಕಾರಗಳು ನೀಚ ಪ್ರಯತ್ನಗಳನ್ನು ಮಾಡಿದ್ದವು ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು
