
ರಾಜ್ಯ ಕಾಂಗ್ರೆಸ್ ಪಾಳಯದಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆಯ ಕೂಗು ಇನ್ನೂ ಕೇಳಿಬರುತ್ತಿದೆ. ಈ ವಿಚಾರವಾಗಿ ಮೌನ ವಹಿಸುವಂತೆ ಕೈ ನಾಯಕರಿಗೆ ಹೈ ಕಮಾಂಡ್ ಖಡಕ್ ವಾರ್ನಿಂಗ್ ಕೂಡ ನೀಡಲಾಗಿತ್ತು.. ವಾರ್ನಿಂಗ್ ನಂತರವೂ ಕೂಡ ಪಕ್ಷದಲ್ಲಿ ಕೆಪಿಸಿಸಿ ಹಾಗೂ ಮುಖ್ಯಮಂತ್ರಿ ಬದಲಾವಣೆಯ ಕೂಗು ಮಾತ್ರ ನಿಂತಿಲ್ಲ. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ವಿಚಾರವಾಗಿ ಮಾಗಡಿ ಶಾಸಕ ಮಾತನಾಡಿದ್ದು ಡಿಕೆ ಶಿವಕುಮಾರ್ ಅವರಿ ಸಿಎಂ ಆದ ಬಳಿಕ ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಆಗುತ್ತದೆ ಎನ್ನುವ ಮೂಲಕ ಮತ್ತೆ ಬದಲಾವಣೆಯ ಕೂಗನ್ನ ಮುನ್ನಲೆಗೆ ತಂದಿದ್ದಾರೆ. ಇದು ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತೋ ಕಾದು ನೋಡಬೇಕು.