Ashwaveega News 24×7 ಏಪ್ರಿಲ್ 9 – 2026 : ರಾಜ್ಯ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ದಾಖಲೆಯ ಮಟ್ಟದಲ್ಲಿ ಫಲಿತಾಂಶ ಕಂಡುಬಂದಿದೆ. ಒಟ್ಟು ಶೇಕಡಾ 86ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಕಳೆದ ಬಾರಿಗಿಂತ ಸುಮಾರು 12.5% ಹೆಚ್ಚಳ ದಾಖಲಾಗಿದೆ.
ಈ ಬಾರಿ ಫಲಿತಾಂಶದಲ್ಲಿ ಹೆಣ್ಮಕ್ಕಳ ಸಾಧನೆ ವಿಶೇಷವಾಗಿ ಗಮನಸೆಳೆದಿದೆ. ವಾಣಿಜ್ಯ ವಿಭಾಗದಲ್ಲಿ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದು ಮೆರೆದಿದ್ದಾರೆ. ದಕ್ಷಿಣ ಕನ್ನಡದ ಆಳ್ವಾಸ್ ಕಾಲೇಜಿನ ದಿಶಾ ಹಾಗೂ ಬೆಂಗಳೂರಿನ ಜೈನ್ ಕಾಲೇಜಿನ ಅದಿತಿ ಬಾಪು ಇಬ್ಬರೂ 600ಕ್ಕೆ 600 ಅಂಕಗಳನ್ನು ಪಡೆದು ಟಾಪರ್ಸ್ ಆಗಿದ್ದಾರೆ.
ಕಲಾ ವಿಭಾಗದಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಕೊಟ್ಟೂರಿನ ಇಂದೂ ಪಿಯು ಕಾಲೇಜಿನ ಅರ್ಚನಾ ಮತ್ತು ಸಂಗೀತಾ ಇಬ್ಬರೂ 598ಕ್ಕೆ 598 ಅಂಕಗಳನ್ನು ಪಡೆದು ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದ್ದಾರೆ. ಇದರಿಂದ ಕಲಾ ವಿಭಾಗದಲ್ಲಿ ಕೊಟ್ಟೂರಿನ ಕಾಲೇಜು ರಾಜ್ಯದ ಗಮನ ಸೆಳೆದಿದೆ.
ವಿಜ್ಞಾನ ವಿಭಾಗದಲ್ಲಿ ಕೋಲಾರದ ಸಹ್ಯಾದ್ರಿ ಕಾಲೇಜಿನ ವಿದ್ಯಾರ್ಥಿನಿ ಶ್ರೀಲಯ 593ಕ್ಕೆ 593 ಅಂಕಗಳನ್ನು ಪಡೆದು ಉನ್ನತ ಸಾಧನೆ ಮಾಡಿದ್ದಾರೆ.
ಒಟ್ಟಾರೆ, ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ವಿದ್ಯಾರ್ಥಿನಿಯರ ಸಾಧನೆ ಮೆರಗು ಮೂಡಿಸಿದ್ದು, ಶಿಕ್ಷಣ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಾಣವಾಗಿದೆ.
