Ashwaveega News 24×7 – ಜನವರಿ 06- ಇತ್ತೀಚಿನ ದಿನಗಳಲ್ಲಿ ಮಧುಮೇಹ ಅನ್ನೋದು ಚಿಕ್ಕಮಕ್ಕಳಿಂದ ಹಿಡಿದು ವಯಸ್ಸಾ ಆದವರಲ್ಲಿಯೋ ಸಾಮಾನ್ಯವಾಗಿ ಕಾಣಿಸುತ್ತೆ . ಮಧುಮೇಹ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ . ಇತ್ತೀಚಿನ ಜೀವನಶೈಲಿ , ಆಹಾರ ಸೇವನೆಯಿಂದ ಮಧುಮೇಹ ಕಾಣಿಸುತ್ತೆ . ಮಧುಮೇಹದಿಂದ ಬಳಲುತ್ತಿರುವವರು ತಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಬಹಳ ಮುಖ್ಯ ಅಲ್ವಾ . ಅದಕ್ಕಾಗಿ ಅವರು ಔಷಧೀಯ ಜೊತೆಗೆ ಯಾವ ಆಹಾರ ಸೇವಿಸಬೇಕು ಅನೋದು ಮುಖ್ಯವಾಗಿರುತ್ತೆ ….
ರಾಗಿ ಮಧುಮೇಹಿಗಳಿಗೆ ಬೆಸ್ಟ್ ಪುಡ್ ಅಂತನೇ ಹೇಳಬಹುದು . ರಾಗಿ ಒಂದು ಪ್ರಮುಖ ಆಹಾರ ಧಾನ್ಯವಾಗಿದ್ದು , ವಿಶೇಷವಾಗಿ ಭಾರತದ ದಕ್ಷಿಣ ಭಾಗದಲ್ಲಿ ಅತಿ ಹೆಚ್ಚು ಬೆಳೆಯಲಾಗುತ್ತದೆ… ಇದು ಆರೋಗ್ಯಕರ ಆಹಾರವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ . ಹೃದಯದ ಆರೋಗ್ಯವನ್ನು ಸುಧಾರಿಸುವುದರ ಜೊತೆಗೆ ತೂಕ ಇಳಿಸಿಕೊಳ್ಳಲು ತುಂಬಾನೇ ಸಹಾಕಾರಿಯಾಗಿದೆ . ಇದು ಆರೋಗ್ಯಕರ ಆಹಾರವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತೆ …

- ರಾಗಿ ಉತ್ತಮ ಕಬ್ಬಿಣದ ಅಂಶವನ್ನು ಹೊಂದಿದೆ . ಇದರಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವವರು ರಾಗಿಯನ್ನು ಸೇವಿಸುವುದರಿಂದ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸಬಹುದು. ಜೊತೆಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣಕ್ಕೂ ಸಹಾಯ ಮಾಡುತ್ತೆ .
- ರಾಗಿಯಲ್ಲಿ ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಪ್ರೋಟೀನ್, ಕಾರ್ಬೋಹೈಡ್ರೇಟ್, ರೈಬೋಫ್ಲಾವಿನ್, ನಿಕೋಟಿನ್, ಥಯಾಮಿನ್, ಕಬ್ಬಿಣ, ಫೋಲಿಕ್ ಆಮ್ಲ ಮತ್ತು ರಂಜಕವಿದೆ. ರಾಗಿಯಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇರುವುದರಿಂದ ಇದು ಮಧುಮೇಹಿಗಳಿಗೆ ಉತ್ತಮ ಆಹಾರವಾಗಿದೆ.
- ರಾಗಿಯಿಂದ ಮಾಡಿದ ರೊಟ್ಟಿಯನ್ನು ತಿನ್ನುವುದು ಮಧುಮೇಹ ರೋಗಿಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಇದರಲ್ಲಿ ಕಂಡುಬರುವ ಪೋಷಕಾಂಶಗಳು ಕೊಲೆಸ್ಟ್ರಾಲ್ ಕಡಿಮೆ ಮಾಡುತ್ತೆ .
- ರಾಗಿ ಹಿಟ್ಟಿನಲ್ಲಿ ಹೆಚ್ಚಿನ ಪ್ರಮಾಣದ ನಾರಿನಂಶವಿದೆ. ಇದು ಕರಗದ ಫೈಬರ್ ಅನ್ನು ಹೊಂದಿರುತ್ತದೆ. ಜೀರ್ಣಕ್ರಿಯೆಯ ಪ್ರಕ್ರಿಯೆಯು ನಿಧಾನಗೊಳಿಸುತ್ತದೆ, ಇದರಿಂದಾಗಿ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಫೈಬರ್ ಹೃದಯದ ಆರೋಗ್ಯಕ್ಕೆ ತುಂಬಾನೇ ಒಳ್ಳೆದು .ರಾಗಿಯನ್ನು ಸೇವಿಸುವುದರಿಂದ ಮಧುಮೇಹಿಗಳನ್ನು ಹೃದಯ ಸಂಬಂಧಿ ಕಾಯಿಲೆಗಳಿಂದ ರಕ್ಷಿಸುತ್ತದೆ.

- ರಾಗಿ ಹಿಟ್ಟು ತಿನ್ನುವುದರಿಂದ ಇದು ಫೈಬರ್ ಮತ್ತು ಪ್ರೋಟೀನ್ನಲ್ಲಿ ಸಮೃದ್ಧವಾಗಿದ್ದು , ಕಬ್ಬಿಣ, ಕ್ಯಾಲ್ಸಿಯಂ, ರಂಜಕ ಮತ್ತು ಮೆಗ್ನೀಸಿಯಮ್ ನಂತಹ ಪ್ರಮುಖ ಪೋಷಕಾಂಶಗಳು ರಾಗಿಯಲ್ಲಿ ಕಂಡುಬರುತ್ತವೆ. ಇದು ನಮ್ಮ ಮೂಳೆಗಳನ್ನು ಬಲಪಡಿಸುವುದರ ಜೊತೆಗೆ , ರಕ್ತಹೀನತೆಯ ಸಮಸ್ಯೆಯನ್ನೂ ದೂರ ಮಾಡುತ್ತದೆ.
- ರಾಗಿಯಲ್ಲಿರುವ ಪೋಷಕಾಂಶಗಳು, ಉರಿಯೂತ ಮತ್ತು ಆಕ್ಸಿಡೇಟಿವ್ ಒತ್ತಡವನ್ನು ಕಡಿಮೆ ಮಾಡುತ್ತದೆ.
- ರಾಗಿ ಮಾಲ್ಟ್ ರೀತಿ ಸೇವಿಸುವುದರಿಂದ ಮೆದುಳಿನ ಉತ್ತಮ ಕಾರ್ಯ ನಿರ್ವಹಣೆಗೆ ಸಹಾಯ ಮಾಡುತ್ತದೆ.
- ರಾಗಿ ರೊಟ್ಟಿ ತಿನ್ನುವುದು ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ. ಇಷ್ಟೆಲ್ಲಾ ಪೋಷಕಾಂಶಗಳಿಂದ ಕೂಡಿರುವ ರಾಗಿಯನ್ನು ಸೇವಿಸುವುದರಿಂದ ದೇಹವು ಆರೋಗ್ಯವಾಗಿರುವುದರ ಜೊತೆಗೆ ಹಲವಾರು ರೋಗಗಳಿಂದ ನಮ್ಮನ್ನು ದೂರವಿಡುತ್ತದೆ.
