Ashwaveega News 24×7 ಫೆಬ್ರವರಿ 17 -2026 : ರಾಜಕೀಯ ಬೆಳವಣಿಗೆಗಳ ಮಧ್ಯೆ “ಪವರ್ ಫೈಟ್” ಮತ್ತಷ್ಟು ತೀವ್ರವಾಗುತ್ತಿದ್ದು, ಸರ್ಕಾರದ ವರಿಷ್ಠರಿಗೆ ಹೊಸ ಟೆನ್ಶನ್ ಶುರುವಾಗಿದೆ. ಸಚಿವ ಸ್ಥಾನ ಆಕಾಂಕ್ಷಿಗಳಿಂದ ಹೈಕಮಾಂಡ್ ಮೇಲೆ ಒತ್ತಡ ಹೆಚ್ಚಾಗಿದೆ.
ಮಂತ್ರಿ ಪಟ್ಟಕ್ಕಾಗಿ ಹಲವು ಶಾಸಕರು ತಿಂಗಳಿನಿಂದ ಕಾದು ಕಾದು ಸುಸ್ತಾಗಿದ್ದಾರೆ. ಈ ನಡುವೆ ಎಸ್ಸಿ/ಎಸ್ಟಿ ಸಮುದಾಯದ ಶಾಸಕರು ಹೊಸ ಬೇಡಿಕೆಯನ್ನು ಮುಂದಿಟ್ಟಿದ್ದಾರೆ. ಸಂಪುಟ ಪುನಾರಚನೆ ವೇಳೆ ದಲಿತ ಸಮುದಾಯಕ್ಕೆ ಹೆಚ್ಚಿನ ಪ್ರತಿನಿಧಿತ್ವ ನೀಡಬೇಕೆಂದು ಆಗ್ರಹಿಸಿದ್ದಾರೆ.
ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ 15ಕ್ಕೂ ಹೆಚ್ಚು ಎಸ್ಸಿ/ಎಸ್ಟಿ ಶಾಸಕರು ದೆಹಲಿಗೆ ತೆರಳಿ Rahul Gandhi ಅವರನ್ನು ಭೇಟಿ ಮಾಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಈಗಾಗಲೇ ಸಚಿವ ಸ್ಥಾನಕ್ಕಾಗಿ ಕಾಯುತ್ತಿರುವ ಶಾಸಕರ ನಡುವೆ ಈ ಹೊಸ ಬೆಳವಣಿಗೆ ರಾಜಕೀಯ ವಲಯದಲ್ಲಿ ಚರ್ಚೆಗೆ ಆಗ್ತಾಯಿದೆ .
ಸಂಪುಟ ಪುನಾರಚನೆ ನಡೆದರೆ ಎಸ್ಸಿ/ಎಸ್ಟಿ ಸಮುದಾಯದವರಿಗೆ ಹೆಚ್ಚಿನ ಸ್ಥಾನ ನೀಡಬೇಕು. ಸಮುದಾಯದ ಸಚಿವರು ಇದ್ದರೆ ಸರ್ಕಾರದ ಯೋಜನೆಗಳು ತಳಮಟ್ಟದ ಜನರಿಗೆ ಪರಿಣಾಮಕಾರಿಯಾಗಿ ತಲುಪುತ್ತವೆ ಎಂಬುದು ಅವರ ವಾದ. ಮುಂಬರುವ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ದಲಿತ ಸಮುದಾಯಕ್ಕೆ ಹೆಚ್ಚಿನ ಪ್ರತಿನಿಧಿತ್ವ ನೀಡುವುದು ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ನಾಯಕರು ಅಭಿಪ್ರಾಯಪಟ್ಟಿದ್ದಾರೆ.
ಈ ಹಿನ್ನೆಲೆಯಲ್ಲಿ ಶಾಸಕರು Rahul Gandhi ಅವರಿಗೆ ಮನವಿ ಸಲ್ಲಿಸಲು ತಯಾರಾಗಿದ್ದಾರೆ. ಈ ಭೇಟಿಯಿಂದ ಸಂಪುಟ ಪುನಾರಚನೆಗೆ ಹೊಸ ದಿಕ್ಕು ಸಿಗುತ್ತದೆಯೇ ಎಂಬುದು ಕಾದು ನೋಡಬೇಕಾಗಿದೆ.
