Ashwaveega News 24×7 ಮಾರ್ಚ್ 17 – 2026 : ಬೆಂಗಳೂರು : ರೈಲ್ವೆ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಿರುವುದರಿಂದ ರಾಜ್ಯಾದ್ಯಂತ ಆಕ್ರೋಶ ಉಂಟಾಗಿದೆ . ಕೇಂದ್ರ ಸರ್ಕಾರದ ಈ ಧೋರಣೆಗೆ ವಿರುದ್ಧವಾಗಿ , ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಕಾರ್ಯಕರ್ತರು ಬೀದಿಗೆ ತರಿಸಿಕೊಂಡು ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ರೈಲ್ವೆ ಇಲಾಖೆಯು ನಡೆಸುತ್ತಿರುವ ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆಗಳಲ್ಲಿ ಪ್ರಾದೇಶಿಕ ಭಾಷೆ ಕನ್ನಡಕ್ಕೆ ಅವಕಾಶ ನೀಡದೆ , ಕೇವಲ ಹಿಂದಿ ಮತ್ತು ಇಂಗ್ಲಿಷ್ನಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದರಿಂದ ರಾಜ್ಯದ ಸಾವಿರಾರು ನಿರುದ್ಯೋಗಿಗಳು ಪರೀಕ್ಷೆ ಬರೆಯಲು ಸಾಧ್ಯವಾಗದೆ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಶುರುವಾದ ಅಭಿಯಾನದ ಬಳಿಕ, ಕರವೇ ಹೋರಾಟವನ್ನು ತೀವ್ರಗೊಳಿಸಿದೆ .

ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಎಲ್ಲ ಪರೀಕ್ಷಾ ಕೇಂದ್ರಗಳಿಗೆ ಮುತ್ತಿಗೆ ಹಾಕುವಂತೆ ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಇದರ ಭಾಗವಾಗಿ, ಹುಬ್ಬಳ್ಳಿಯ ಆರ್ಆರ್ಸಿ ಚೇರಿಯ ಎದುರು ಒಂದು ಗಂಟೆಗೆ ಹೆಚ್ಚು ಕಾಲ ಕರವೇ ಕಾರ್ಯಕರ್ತರು ಉಗ್ರ ಪ್ರತಿಭಟನೆ ನಡೆಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ರೈಲ್ವೆ ಅಧಿಕಾರಿಗಳು ತಕ್ಷಣವೇ ನಡೆಯುತ್ತಿದ್ದ ಪರೀಕ್ಷೆಯನ್ನು ಅರ್ಧಕ್ಕೆ ರದ್ದುಗೊಳಿಸಿದರು. ಪರೀಕ್ಷಾ ಸಿಬ್ಬಂದಿ ಕೇಂದ್ರದಲ್ಲಿದ್ದ ಅಭ್ಯರ್ಥಿಗಳನ್ನು ಹೊರಗೆ ಕಳುಹಿಸಿದರು. ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಕಂಗಾಲಾದ ಅಭ್ಯರ್ಥಿಗಳು, ಪರೀಕ್ಷೆ ರದ್ದಾದ ಸುದ್ದಿ ಕೇಳಿ ಅತ್ಯಂತ ಖುಷಿಯಿಂದ ಕೇಂದ್ರದಿಂದ ಹೊರಬಂದರು.
“ಪ್ರಸ್ತುತ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಮುಂದಿನ ದಿನಾಂಕವನ್ನು ಅನಂತರ ಪ್ರಕಟಿಸಲಾಗುವುದು. ಪರೀಕ್ಷೆಯನ್ನು ಕನ್ನಡದಲ್ಲಿಯೂ ನಡೆಸುವ ಕುರಿತು ಮೇಲಧಿಕಾರಿಗಳು ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.”
ಈ ಘಟನೆ ರಾಜ್ಯದಲ್ಲಿ ಪ್ರಾದೇಶಿಕ ಭಾಷೆ ಪರಿರಕ್ಷಣೆ ಮತ್ತು ಉದ್ಯೋಗಾವಕಾಶದ ಹಕ್ಕುಗಳ ಕುರಿತಾದ ಮಹತ್ವದ ಸಂವೇದನಶೀಲ ತಾಣವನ್ನಾಗಿ ಬಂದಿದೆ.
