
Ashwaveega News 24×7 ಅ. 08: 2023ರ ಅಕ್ಟೋಬರ್ನಲ್ಲಿ ಬೆಳಗಾವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಮಸೀದಿಯಲ್ಲಿ ಐದು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದ್ದು, ಆರೋಪಿಯನ್ನು ತುಫೆಲಹ್ಮದ್ ದಾದಾಪೀರ್ ನಾಗರ್ಚಿ(22)ಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಮ್ಮ ಟ್ವಿಟರ್ ಹ್ಯಾಂಡಲ್ನಲ್ಲಿ ಮಸೀದಿ ಒಳಗಿನ ಸಿಸಿಟಿವಿ ದೃಶ್ಯಾವಳಿಯನ್ನು ಪೋಸ್ಟ್ ಮಾಡಿದ ನಂತರ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಘಟನೆ ಬೆಳಕಿಗೆ ಬಂದಿದೆ.
ಕೆರೆಹಳ್ಳಿ ಟ್ವಿಟರ್ನಲ್ಲಿ ಘಟನೆಯನ್ನು ಬಹಿರಂಗಪಡಿಸಿದ ತಕ್ಷಣ ಪೊಲೀಸ್ ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ ಎಂದು ಬೆಳಗಾವಿ ಎಸ್ಪಿ ಭೀಮಾಶಂಕರ್ ಗುಳೇದ್ ಅವರು ಹೇಳಿದ್ದಾರೆ.
ಪೊಲೀಸರು ಬಾಲಕಿಯ ಪೋಷಕರನ್ನು ಭೇಟಿಯಾಗಿದ್ದು, ಅವರು ಘಟನೆಯ ಬಗ್ಗೆ ಪೊಲೀಸರನ್ನು ಸಂಪರ್ಕಿಸಿಲ್ಲ. ಪ್ರಕರಣದಲ್ಲಿ ಪೊಲೀಸರು ಟ್ವಿಟರ್ನಲ್ಲಿ ಪೋಸ್ಟ್ ಮಾಡಿದ ವಿಡಿಯೋ ಕ್ಲಿಪ್ ಅನ್ನು ದಾಖಲೆಯಾಗಿ ಬಳಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪೊಲೀಸರು ತಕ್ಷಣ ಕ್ರಮ ಕೈಗೊಂಡು ಮುಧೋಳ ತಾಲ್ಲೂಕಿನ ಮಹಾಲಿಂಗಪುರ ಪಟ್ಟಣದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು ಅವರು ಹೇಳಿದ್ದಾರೆ.