Ashwaveega News 24×7 ಫೆಬ್ರವರಿ 06 -2026 – ಬೆಂಗಳೂರು : ರಾಜ್ಯ ಸರ್ಕಾರ IPS ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆ ಮುಂದುವರಿಸಿದ್ದು, ರಾಜ್ಯ ಅಗ್ನಿಶಾಮಕ ಹಾಗೂ ತುರ್ತುಸೇವಾ ಇಲಾಖೆಯ ಡಿಐಜಿ ಆಗಿದ್ದ ರವಿ.ಡಿ.ಚನ್ನಣ್ಣನವರ್ ಅವರನ್ನು ಕಾರ್ಮಿಕ ಇಲಾಖೆಗೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಡಿಐಜಿ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ರವಿ.ಡಿ.ಚನ್ನಣ್ಣನವರ್ ಅವರಿಗೆ ಕಾರ್ಮಿಕ ಕಲ್ಯಾಣ ಮಂಡಳಿ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಪ್ರಕಟಿಸಿದೆ.
ಸುಮಾರು ಎರಡೂವರೆ ವರ್ಷಗಳ ಕಾಲ ಅಗ್ನಿಶಾಮಕ ಇಲಾಖೆಯಲ್ಲಿ ಸೇವೆ ಸಲ್ಲಿಸಿದ್ದ ರವಿ.ಡಿ.ಚನ್ನಣ್ಣನವರ್, ಇದೀಗ ಮತ್ತೆ ಸ್ಥಳ ಬದಲಾವಣೆಗೊಂಡಿದ್ದಾರೆ. ರಾಜ್ಯದಲ್ಲಿ ಮುಂದುವರಿದಿರುವ IPS ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯ ಭಾಗವಾಗಿ ಈ ಆದೇಶ ಹೊರಬಿದ್ದಿದೆ.
ರಾಜ್ಯ ಆಡಳಿತ ವ್ಯವಸ್ಥೆಯಲ್ಲಿ ಚುರುಕು ತರಲು ಹಾಗೂ ಇಲಾಖೆಗಳ ಕಾರ್ಯಕ್ಷಮತೆ ಹೆಚ್ಚಿಸುವ ಉದ್ದೇಶದಿಂದ ಸರ್ಕಾರ ಹಂತಹಂತವಾಗಿ ಅಧಿಕಾರಿಗಳ ವರ್ಗಾವಣೆ ಮಾಡುತ್ತಿದೆ . ಇನ್ನೂ ಮುಂದಿನ ದಿನಗಳಲ್ಲಿ ಮತ್ತಷ್ಟು IPS ಅಧಿಕಾರಿಗಳ ವರ್ಗಾವಣೆ ಆದೇಶಗಳು ಪ್ರಕಟವಾಗುವ ಸಾಧ್ಯತೆ ಇದೆ .
