ಬೆಂಗಳೂರು : ನಿಮಗೆ ಸರ್ಕಾರಿ ಉದ್ಯೋಗ ಬೇಕಾ ಇಲ್ಲಿದೆ ನೋಡಿ ಜಾಬ್ ಆಫರ್. ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಗ್ರೂಪ್-ಸಿ ವೃಂದದ ಉಳಿಕೆ ಮೂಲ ವ್ಯಂದದಲ್ಲಿ ಖಾಲಿ ಇರುವ ಹಾಗೂ ಕಲ್ಯಾಣ ಕರ್ನಾಟಕ ವೃಂದದಲ್ಲಿ ಖಾಲಿ ಇರುವ ಕರ್ಕ್-ಕಂ-ಟೈಪಿಸ್ಟ್ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ನೇಮಕಾತಿ ಅಧಿಸೂಚನೆ ಬಿಡುಗಡೆ ಮಾಡಲಾಗಿದ್ದು, ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಾಯುಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಇನ್ನೂ ಪಿಯುಸಿ ಪಾಸ್ ಆದವರು ಈ ನವೆಂಬರ್ ತಿಂಗಳ 29 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದ್ದು, ಇಲಾಖೆಯ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ವಿವರ :
* ಹುದ್ದೆಯ ಹೆಸರು – ಕ್ಲರ್ಕ್ ಕಮ್ ಟೈಪಿಸ್ಟ್
* ಒಟ್ಟು ಹುದ್ದೆಗಳು- 30 (ಕಲ್ಯಾಣ ಕರ್ನಾಟಕಕ್ಕೆ 14 ಹುದ್ದೆಗಳನ್ನು ಮೀಸಲಿರಿಸಲಾಗಿದೆ).
* * ವೇತನ ಶ್ರೇಣಿ – ರೂ 34,100 ರಿಂದ ರೂ 67.600
ಶೈಕ್ಷಣಿಕೆ ವಿದ್ಯಾರ್ಹತೆ
* ಅರ್ಜಿ ಸಲ್ಲಿಸುವ ಅಭ್ಯರ್ಥಿಯೂ ಪದವಿ ಪೂರ್ವ ಶಿಕ್ಷಣ ಪರೀಕ್ಷೆ ಪಾಸ್ ಆಗಿರಬೇಕು.
* ಕರ್ನಾಟಕ ಫ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕನ್ನಡ ಮತ್ತು ಆಂಗ್ಲ ಕಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
* ವಯೋಮಿತಿ
* ಅಭ್ಯರ್ಥಿಗಳ ಕನಿಷ್ಠ ವಯೋಮಿತಿ 18 ವರ್ಷ ಹಾಗೂ ಗರಿಷ್ಠ ವಯೋಮಿತಿ 38 ವರ್ಷವಾಗಿದೆ. ಆದರೆ ಪ್ರವರ್ಗ 2ಎ , 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಪ.ಜಾ, ಪ. ಪಂ ಹಾಗೂ ಪ್ರವರ್ಗ 1 ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.
ಅರ್ಜಿ ಶುಲ್ಕ ಹಾಗೂ ಆಯ್ಕೆ ಪ್ರಕ್ರಿಯೆ
* ಸಾಮಾನ್ಯ, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 250 ರೂ ಅರ್ಜಿ ಶುಲ್ಕವಿರುತ್ತದೆ.
* ಪ. ಜಾ, ಪ.ಪಂ ಮತ್ತು ಪ್ರವರ್ಗ 1 ಹಾಗೂ ವಿಕಲಚೇತನ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.
* ವಿದ್ಯಾರ್ಹತೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ, ಮೀಸಲಾತಿ ಆಧಾರದಲ್ಲಿ 1:10 ಅನುಪಾತದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಪ್ರಕಟಿಸಲಾಗುತ್ತದೆ.
ಈ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆಯಿರುತ್ತದೆ. ಆದರೆ ಈ ಪರೀಕ್ಷೆಯಲ್ಲಿ ಕನಿಷ್ಠ ಶೇ 50 ರಷ್ಟು ಅಂಕಗಳನ್ನು ಕಡ್ಡಾಯವಾಗಿ ಪಡೆಯಲೇಬೇಕು.
ಅರ್ಜಿ ಸಲ್ಲಿಕೆಯ ಪ್ರಮುಖ ದಿನಾಂಕ
* ಅರ್ಜಿ ಸಲ್ಲಿಸಲು ಕೊನೆ ದಿನಾಂಕ- 29 ನವೆಂಬರ್ 2024
* ಶುಲ್ಕ ಪಾವತಿಗೆ ಕೊನೆ ದಿನಾಂಕ- 30 ನವೆಂಬರ್ 2024