Ashwaveega News 24×7 ಮಾರ್ಚ್ 13– 2026 : ವಾಣಿಜ್ಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆ ಬೆಂಗಳೂರಿನ ಹೋಟೆಲ್ ಉದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಕಳೆದ ಆರು ದಿನಗಳಿಂದ ಹಲವೆಡೆ ಕಮರ್ಷಿಯಲ್ ಸಿಲಿಂಡರ್ ಪೂರೈಕೆ ಆಗದ ಕಾರಣ ಹೋಟೆಲ್ ಮಾಲೀಕರು ಪರದಾಡುತ್ತಿದ್ದಾರೆ.
ಗ್ಯಾಸ್ ಸಿಗದ ಪರಿಸ್ಥಿತಿಯಲ್ಲಿ ಕೆಲ ಹೋಟೆಲ್ ಮಾಲೀಕರು ತಾತ್ಕಾಲಿಕ ಪರಿಹಾರವಾಗಿ ಸೌದೆ ಒಲೆಯನ್ನು ಬಳಸಲು ಮುಂದಾಗಿದ್ದಾರೆ. ಸದ್ಯ ಬೆಂಗಳೂರಿನ ಆರ್.ಆರ್.ನಗರದಲ್ಲಿರುವ “ನಮ್ಮೂರು ಕಾಫಿ ಕಟ್ಟೆ” ಹೋಟೆಲ್ನಲ್ಲಿ ಸೌದೆ ಒಲೆಯಲ್ಲಿ ಅಡುಗೆ ಮಾಡಲಾಗುತ್ತಿದೆ. ಅಲ್ಲಿ ಇಡ್ಲಿ ಸೇರಿದಂತೆ ಹಲವು ತಿಂಡಿಗಳನ್ನು ಸೌದೆ ಒಲೆಯಲ್ಲಿ ತಯಾರಿಸಲಾಗುತ್ತಿದೆ .
ಗ್ಯಾಸ್ ಕೊರತೆಯಿಂದಾಗಿ ಕೆಲವು ಹೋಟೆಲ್ಗಳು ಕಾರ್ಯಾಚರಣೆ ನಡೆಸಲು ಸಾಧ್ಯವಾಗದೇ ಬಂದ್ ಆಗಿವೆ. ಗಾಂಧಿನಗರದ 3ನೇ ಕ್ರಾಸ್ನಲ್ಲಿರುವ ಪ್ರಸಿದ್ಧ ಐಡಿಸಿ ಕಿಚನ್ ಕೂಡ ಗ್ಯಾಸ್ ಸಿಗದ ಕಾರಣ ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಹೋಟೆಲ್ ಮುಂದೆ ‘ಕ್ಲೋಸ್’ ಎಂಬ ಬೋರ್ಡ್ ಹಾಕಿ ಸಿಬ್ಬಂದಿ ಗ್ರಾಹಕರಿಗೆ ಮಾಹಿತಿ ನೀಡಿದ್ದಾರೆ.
ಗ್ಯಾಸ್ ಬಿಕ್ಕಟ್ಟು ಮುಂದುವರಿದರೆ ಹೋಟೆಲ್ ಉದ್ಯಮಕ್ಕೆ ಮತ್ತಷ್ಟು ಹೊಡೆತ ಬೀಳುವ ಸಾಧ್ಯತೆ ಇದೆ ಎಂದು ಹೋಟೆಲ್ ಮಾಲೀಕರು ಆತಂಕ ವ್ಯಕ್ತಪಡಿಸಿದ್ದಾರೆ. ತಕ್ಷಣವೇ ವಾಣಿಜ್ಯ ಗ್ಯಾಸ್ ಪೂರೈಕೆ ಸರಿಪಡಿಸಬೇಕು ಎಂದು ಅವರು ಸರ್ಕಾರದ ಗಮನಕ್ಕೆ ತಂದಿದ್ದಾರೆ.
