
Ashwaveega News 24×7 ಸೆ. 19: ಭೀಮಾತೀರದ ಚಡಚಡಚಣದಲ್ಲಿ SBI ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದ್ದಂತೆ ಒಂದು ಚಿನ್ನದ ಬ್ಯಾಗ್ ಪತ್ತೆಯಾಗಿದೆ . ಸೆ. 16 ರಂದು ದರೋಡೆ ಪ್ರಕರಣದಲ್ಲಿ ಒಟ್ಟು 21.04 ಕೋಟಿ ರೂಪಾಯಿ ಮೌಲ್ಯದ ಚಿನ್ನಹಾಗೂ ನಗದು ಕಳುವಾಗಿತ್ತು.
ವಿಜಯಪುರ ಜಿಲ್ಲೆಯ ಚಡಚಡಣದಲ್ಲಿ SBI ಬ್ಯಾಂಕ್ನಲ್ಲಿ ಮೂವರು ಮಾಸ್ಕ್ ಧರಿಸಿ ಗನ್ ತೋರಿಸಿ ದರೋಡೆ ಮಾಡಿದ್ದರು . ಈ ಘಟನೆ ನಡೆದ ಕಲವೇ ಗಂಟೆಯಲ್ಲಿ ಕಾರು ಮಹಾರಾಷ್ಟ್ರದ ಹುಲಜಂತಿತಲ್ಲಿ ಪತ್ತೆಯಾಗಿತ್ತು . ಇದೀಗ ಮನೆಯ ಮಾಳಿಗೆಯೊಂದರ ಮೇಲೆ ಚಿನ್ನ ತುಂಬಿದ ಬ್ಯಾಗ್ ಪತ್ತೆಯಾಗಿದೆ .
ಎಸ್ಪಿ ಲಕ್ಷ್ಮಣ ನಿಂಬರಗಿ ನೀಡಿದ ಮಾಹಿತಿಯ ಪ್ರಕಾರ, ಪಾಳುಬಿದ್ದ ಮನೆ ಚಾವಣಿಯಲ್ಲಿ ಪತ್ತೆಯಾದ ಬ್ಯಾಗ್ನಲ್ಲಿ 6.54 ಕೆಜಿ ಚಿನ್ನಾಭರಣ, 41.4 ಲಕ್ಷ ರೂ. ನಗದು ಸಿಕ್ಕಿದೆ. ಚಡಚಣದ ಎಸ್ಬಿಐ ಬ್ಯಾಂಕ್ನಲ್ಲಿ ನಡೆದ ದರೋಡೆಯಲ್ಲಿ ಒಟ್ಟು 1.5 ಕೋಟಿ ರೂ. ನಗದು ಕಳವಾಗಿತ್ತು. ಅಲ್ಲದೆ 20 ಕೆಜಿಗೂ ಹೆಚ್ಚಿನ ಚಿನ್ನಾಭರಣ ದೋಚಲಾಗಿತ್ತು.
ದರೋಡೆ ನಡೆದ ದಿನವಾದ ಸೆಪ್ಟೆಂಬರ್ 16ರಂದು ದರೋಡೆಕೋರರು ಬಳಸಿದ ಇಕೋ ವಾಹನ ಹುಲಜಂತಿ ಗ್ರಾಮದಲ್ಲೇ ಪತ್ತೆಯಾಗಿತ್ತು. ಈ ವಾಹನ ಬೈಕ್ಗೆ ಡಿಕ್ಕಿ ಹೊಡೆದಾಗ ಸ್ಥಳೀಯರು ಪ್ರಶ್ನಿಸಿದಾಗ, ವಾಹನದಲ್ಲಿದ್ದ ಆರೋಪಿಗಳು ಪಿಸ್ತೂಲ್ ತೋರಿಸಿ ಪರಾರಿಯಾಗಿದ್ದರು. ಆ ಸಂದರ್ಭದಲ್ಲಿ ಸ್ಥಳೀಯರಿಗೆ ಸಿಕ್ಕಿದ್ದ ಬ್ಯಾಗ್ನಲ್ಲಿಯೂ ಸ್ವಲ್ಪಚಿನ್ನಾಭರಣ ಹಾಗೂ 1.30 ಲಕ್ಷ ರೂ. ನಗದು ಸಿಕ್ಕಿತ್ತು. ದರೋಡೆಕೋರರು ಪರಾರಿಯಾಗುವ ವೇಳೆ ಚಿನ್ನಾಭರಣ ಮತ್ತು ನಗದು ಹೊಂದಿದ್ದ ಬ್ಯಾಗ್ ಅನ್ನು ಪಾಳು ಮನೆಯ ಮೇಲ್ಚಾವಣಿಯಲ್ಲಿ ಇಟ್ಟು ಹೋಗಿರಬಹುದು ಎಂದು ಶಂಕಿಸಲಾಗಿದೆ.