
Atrocity Case Filed Against Vijay Deverakonda
ಬುಡಕಟ್ಟು ಸಮುದಾಯದ ಭಾವನೆಗಳಿಗೆ ನೋವುಂಟು ಮಾಡುವ ಹೇಳಿಕೆ ನೀಡಿದ್ದಾರೆ ಎಂಬ ಆರೋಪದ ಮೇಲೆ ನಟ ವಿಜಯ್ ದೇವರಕೊಂಡ ವಿರುದ್ಧ ದೂರು ದಾಖಲಾಗಿದೆ. ಅವರ ವಿರುದ್ಧ ಎಸ್ಸಿ/ಎಸ್ಟಿ ಕಾಯ್ದೆಯಡಿ ದೂರು ದಾಖಲಿಸಲಾಗಿರುವುದರಿಂದ ಕಾನೂನು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಬುಡಕಟ್ಟು ಸಮುದಾಯದ ಜಂಟಿ ಕ್ರಿಯಾ ಸಮಿತಿಯ ಅಧ್ಯಕ್ಷ ನೆನವತ್ ಅಶೋಕ್ ಕುಮಾರ್ ಈ ದೂರು ದಾಖಲಿಸಿದ್ದಾರೆ. ‘ರೆಟ್ರೋ’ ಚಿತ್ರದ ಬಿಡುಗಡೆ ಪೂರ್ವ ಕಾರ್ಯಕ್ರಮದಲ್ಲಿ ದೇವರಕೊಂಡ ಅವರ ಹೇಳಿಕೆಗಳು ಆಕ್ಷೇಪಾರ್ಹವಾಗಿವೆ. ಇವು ಬುಡಕಟ್ಟು ಸಮುದಾಯವನ್ನು ಅವಮಾನಿಸಿವೆ ಎಂದು ಅವರು ಆರೋಪಿಸಿದ್ದಾರೆ. ಸೈಬರಾಬಾದ್ನ ರಾಯದುರ್ಗಂ ಪೊಲೀಸ್ ಠಾಣೆಯಲ್ಲಿ ದೇವರಕೊಂಡ ವಿರುದ್ಧ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.
ಹೈದರಾಬಾದ್ನಲ್ಲಿ ‘ರೆಟ್ರೋ’ ಚಿತ್ರದ ಪ್ರಚಾರಕ್ಕಾಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ವಿಜಯ್ ದೇವರಕೊಂಡ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಲಾಗಿತ್ತು. ಆ ಸಮಯದಲ್ಲಿ, ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆದಿತ್ತು. ಇದರ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವೆ ವಿವಾದ ಉಂಟಾಗುತ್ತಿತ್ತು. ಅಂತಹ ಪರಿಸ್ಥಿತಿಯಲ್ಲಿ, ವಿಜಯ್ ಪಾಕಿಸ್ತಾನದ ವಿರುದ್ಧ ಮಾತನಾಡುತ್ತಿದ್ದರು.
ಮಾತನಾಡುವವ ವೇಳೆ ಭಾರತ-ಪಾಕಿಸ್ತಾನ ಯುದ್ಧವನ್ನು ಬುಡಕಟ್ಟು ಸಮುದಾಯಗಳಿಗೆ ಹೋಲಿಸಿ ಮಾತನಾಡಿದ್ದರು ಎನ್ನಲಾಗಿದೆ. ‘ಹಿಂದೆ ಬುಡಕಟ್ಟು ಕುಲಗಳು ಜಗಳವಾಡುತ್ತಿದ್ದಂತೆಯೇ, ಭಾರತ ಮತ್ತು ಪಾಕಿಸ್ತಾನ ಈಗ ಜಗಳವಾಡುತ್ತಿವೆ’ ಎಂದು ಹೇಳಿದರು. ಈ ಹೇಳಿಕೆ ಆಕ್ಷೇಪ ವ್ಯಕ್ತಪಡಿಸಿರುವ ಸಮುದಾಯ ದೂರು ನೀಡಿದೆ.