
ಚಾಂಪಿಯನ್ಸ್ ಟ್ರೋಫಿಯ ಮೊದಲ ಸೆಮಿಪೈನಲ್ ಪಂದ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಸೆಣಸಾಡಲಿವೆ. ಈ ಪಂದ್ಯದಲ್ಲಿ ಭಾರತಕ್ಕೆ 2023ರ ವಿಶ್ವಕಪ್ ಸೋಲಿಗೆ ಸೇಡು ತೀರಿಸಿಕೊಳ್ಳುವ ಅವಕಾಶ ಒದಗಿ ಬಂದಿದೆ. ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ಈ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಭಾರತ ಆಡುವ ಹನ್ನೊಂದರಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಎಂದೇಳಲಾಗುತ್ತಿದೆ. ಮೊದಲ ಎರಡು ಪಂದ್ಯದಲ್ಲಿ ಕಣಕ್ಕಿಳಿದಿದ್ದ ಹರ್ಷಿತ್ ರಾಣಾ ಅವರನ್ನು ಕಳೆದ ಪಂದ್ಯದಲ್ಲಿ ವಿಶ್ರಾಂತಿ ನೀಡಲಾಗಿತ್ತು. ಅವರ ಸ್ಥಾನದಲ್ಲಿ ಮಿಸ್ಟ್ರಿ ಸ್ಪಿನ್ನರ್ ವರುಣ್ ಚಕ್ರವರ್ತಿಗೆ ಆಡುವ ಅವಕಾಶ ನೀಡಲಾಗಿತು. ಆ ಪಂದ್ಯದಲ್ಲಿ ವರುಣ್ 5 ವಿಕೆಟ್ ಕಬಳಿಸಿ ಪಂದ್ಯ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಹೀಗಾಗಿ ಆಸ್ಟ್ರೇಲಿಯಾ ವಿರುದ್ದವು ನಾಲ್ಕು ಸ್ಪಿನ್ನರ್, ಇಬ್ಬರು ವೇಗಿಗಳೊಂದಿಗೆ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಹಾಗಾದರೆ ಅರ್ಷದೀಪ್ ಸಿಂಗ್,ರಿಷಬ್ ಪಂತ್ ಸೆಮಿಫೈನಲ್ ಪಂದ್ಯಗಳಲ್ಲಿಯತೂ ಬೆಂಚ್ ಕಾಯಬೇಕಾಗುತ್ತದೆ..
ಭಾರತ ತಂಡ
ರೋಹಿತ್ ಶರ್ಮ, ಶುಭಮಾನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಕುಲ್ದೀಪದ ಯಾದವ್, ವರುಣ್ ಚಕ್ರವರ್ತಿ, ಮೊಹಮ್ಮದ್ ಶಮಿ

ಅಭಿಷೇಕ್.ಎಸ್