
Shefali Jariwala death: Actor cremated in Mumbai
ಬಾಲಿವುಡ್ನ ಖ್ಯಾತ ನಟಿ ಹಾಗೂ ಮಾಡೆಲ್ ಶೆಫಾಲಿ ಜರಿವಾಲಾ ಅವರು ಜೂನ್ 27ರ ರಾತ್ರಿ ಹೃದಯ ಸ್ತಂಭನದಿಂದ ನಿಧನ ಹೊಂದಿದ್ದಾರೆ. ಕನ್ನಡದಲ್ಲಿ ಪುನೀತ್ ರಾಜ್ಕುಮಾರ್ ನಟನೆಯ ಹುಡುಗರು ಚಿತ್ರದ ‘ನಾ ಬೋರ್ಡು ಇರದ ಬಸ್ಸನು’ಹಾಡಿಗೆ ಶೆಫಾಲಿ ಹೆಜ್ಜೆ ಹಾಕಿದ್ದರು.
ಹಿಂದಿ ಬಿಗ್ ಬಾಸ್ 13ರ ಸ್ಪರ್ಧಿಯಾಗಿದ್ದರು. 42 ವರ್ಷದ ಶೆಫಾಲಿ ಮುಂಬೈನ ಅಂಧೇರಿ ಲೋಖಂಡ್ವಾಲಾದಲ್ಲಿ ವಾಸಿಸುತ್ತಿದ್ದರು. ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆ ಶೆಫಾಲಿ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ಅಷ್ಟು ಹೊತ್ತಿಗಾಗಲೇ ಶೆಫಾಲಿ ಕೊನೆಯುಸಿರೆಳೆದಿದ್ದರು. ಶೆಫಾಲಿ ಅವರ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕೂಪರ್ ಆಸ್ಪತ್ರೆಗೆ ಕಳುಹಿಸಲಾಗಿದೆ.
1982ರ ಡಿಸೆಂಬರ್ 15ರಂದು ಜನಿಸಿದ ಶೆಫಾಲಿ ಮುಂಬೈನಲ್ಲಿ ಬೆಳೆದರು. 2004ರಲ್ಲಿ ಹರ್ಮೀತ್ ಸಿಂಗ್ ಜೊತೆ ಶೆಫಾಲಿ ವಿವಾಹವಾದರು. ಆ ಬಳಿಕ ಪತಿಯೊಂದಿಗೆ ವಿಚ್ಛೇದನ ಪಡೆದು 2014ರಲ್ಲಿ ಪರಾಗ್ ತ್ಯಾಗಿ ಅವರನ್ನು ಶೆಫಾಲಿ ಮದುವೆಯಾಗಿ ಸಂಸಾರ ನಡೆಸುತ್ತಿದ್ದರು.
2002ರಲ್ಲಿ ಕಾಂತ ಲಗಾ ಎನ್ನುವ ಹಾಡಿನ ಮೂಲಕ ಶೆಫಾಲಿ ಜರಿವಾಲಾ ಹೆಚ್ಚು ಪ್ರಖ್ಯಾತಿಯನ್ನು ಪಡೆದಿದ್ದರು. ಹಲವಾರು ರಿಯಾಲಿಟಿ ಶೋಗಳಲ್ಲಿ ಕಾಣಿಸಿಕೊಂಡಿದ್ದರು. ಪರಾಗ್ ತ್ಯಾಗಿ, ಶೆಫಾಲಿ ಜರಿವಾಲಾ ಟೆಲಿವಿಷನ್ ಹಾಗೂ ಸಿನಿಮಾ ಎರಡರಲ್ಲೂ ಕೆಲಸ ಮಾಡುತ್ತಿದ್ದರು.