ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶಿಖರ್ ಧವನ್ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿದ್ದಾರೆ. 38 ವರ್ಷ ವಯಸ್ಸಿನ ಧವನ್ ಸಾಮಾಜಿಕ ಮಾಧ್ಯಮದ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಪ್ರಕಟಿಸಿದ್ದು, ಈ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಗುಡ್ ಬೈ ಹೇಳುತ್ತಿರುವುದಾಗಿ ತಿಳಿಸಿದ್ದಾರೆ. ಶಿಖರ್ ಧವನ್ ಕೊನೆಯ ಬಾರಿಗೆ ಟೀಮ್ ಇಂಡಿಯಾವನ್ನು ಪ್ರತಿನಿಧಿಸಿದ್ದು 2022 ರಲ್ಲಿ.
2022ರ ಬಾಂಗ್ಲಾದೇಶ ಪ್ರವಾಸದ ನಂತರ ಧವನ್ ಭಾರತ ತಂಡದಲ್ಲಿ ಕಾಣಿಸಿಕೊಂಡಿಲ್ಲ. ಇದಾಗ್ಯೂ ಅವರು ಕಂಬ್ಯಾಕ್ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಅದರಲ್ಲೂ ದುಲೀಪ್ ಟ್ರೋಫಿಗೆ ಆಯ್ಕೆ ಮಾಡಲಾದ ನಾಲ್ಕು ತಂಡಗಳಲ್ಲೂ ಅವರ ಹೆಸರು ಕಾಣಿಸಿಕೊಂಡಿರಲಿಲ್ಲ. ಹೀಗಾಗಿ ನಿವೃತ್ತಿ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎನ್ನಲಾಗಿದೆ.
ನನ್ನ ಕ್ರಿಕೆಟ್ ಪಯಣದ ಈ ಅಧ್ಯಾಯವನ್ನು ಮುಕ್ತಾಯಗೊಳಿಸುತ್ತಿದ್ದೇನೆ. ಈ ಪ್ರಯಾಣದಲ್ಲಿ ನಾನು ನನ್ನೊಂದಿಗೆ ಅಸಂಖ್ಯಾತ ನೆನಪುಗಳು ಮತ್ತು ಕೃತಜ್ಞತೆಯನ್ನು ಹೊಂದಿದ್ದೇನೆ. ನಿಮ್ಮ ಪ್ರೀತಿ ಮತ್ತು ಬೆಂಬಲಕ್ಕಾಗಿ ಧನ್ಯವಾದಗಳು! ಜೈ ಹಿಂದ್!” ಎಂದು ಧವನ್ ವಿಡಿಯೋದಲ್ಲಿ ಹೇಳಿದ್ದಾರೆ.
As I close this chapter of my cricketing journey, I carry with me countless memories and gratitude. Thank you for the love and support! Jai Hind! 🇮🇳 pic.twitter.com/QKxRH55Lgx
— Shikhar Dhawan (@SDhawan25) August 24, 2024
ಭಾರತಕ್ಕಾಗಿ ಆಡುವ ಗುರಿಯನ್ನು ನಾನು ಯಾವಾಗಲೂ ಮನಸ್ಸಿನಲ್ಲಿಟ್ಟುಕೊಂಡಿದ್ದೆ. ನಾನು ಅದನ್ನು ಸಾಧಿಸಿದೆ. ಇದಕ್ಕಾಗಿ ಬಹಳಷ್ಟು ಜನರಿಗೆ ಧನ್ಯವಾದಗಳು. ಮೊದಲನೆಯದಾಗಿ ನನ್ನ ಕುಟುಂಬ, ನನ್ನ ಬಾಲ್ಯದ ಕೋಚ್ ತಾರಕ್ ಸಿನ್ಹಾ ಮತ್ತು ಮದನ್ ಶರ್ಮಾ ಅವರ ಮಾರ್ಗದರ್ಶನದಲ್ಲಿ ನಾನು ಕ್ರಿಕೆಟ್ ಕಲಿತೆ. ನಂತರ ನಾನು ವರ್ಷಗಳ ಕಾಲ ಆಡಿದ ನನ್ನ ಇಡೀ ತಂಡ ಮತ್ತೊಂದು ಕುಟುಂಬದಿಂದ ಖ್ಯಾತಿ ಮತ್ತು ಎಲ್ಲರ ಪ್ರೀತಿ ಮತ್ತು ಬೆಂಬಲ ಸಿಕ್ಕಿತು. ಜೀವನದಲ್ಲಿ ಮುನ್ನಡೆಯಲು ಪುಟವನ್ನು ತಿರುಗಿಸುವುದು ಮುಖ್ಯ. ಅದಕ್ಕಾಗಿಯೇ ನಾನು ಅಂತರರಾಷ್ಟ್ರೀಯ ಮತ್ತು ದೇಶೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸುತ್ತಿದ್ದೇನೆ ಎಂದು ಶಿಖರ್ ಧವನ್ ತಿಳಿಸಿದ್ದಾರೆ.
ದೇಶಕ್ಕಾಗಿ ನಾನು ಸಾಕಷ್ಟು ಆಡಿದ್ದೇನೆ ಎಂಬ ತೃಪ್ತಿ ನನಗಿದೆ. ನನಗೆ ಈ ಅವಕಾಶವನ್ನು ನೀಡಿದ ಬಿಸಿಸಿಐ, ಡಿಡಿಸಿಎ (ದೆಹಲಿ ಕ್ರಿಕೆಟ್ ಸಂಸ್ಥೆ) ಮತ್ತು ಬೆಂಬಲಸಿದ ನನ್ನ ಎಲ್ಲಾ ಅಭಿಮಾನಿಗಳಿಗೆ ನಾನು ನಿಜವಾಗಿಯೂ ಕೃತಜ್ಞನಾಗಿದ್ದೇನೆ. ನಾನು ಮತ್ತೆ ನಿಮ್ಮ ದೇಶಕ್ಕಾಗಿ ಆಡುವುದಿಲ್ಲ ಎಂದು ದುಃಖಿಸಬೇಡಿ. ಆದರೆ ನಿಮ್ಮ ದೇಶಕ್ಕಾಗಿ ನೀವು ಆಡಿದ್ದಕ್ಕಾಗಿ ಯಾವಾಗಲೂ ಸಂತೋಷವಾಗಿರಿ. ಇದು ನನ್ನ ದೊಡ್ಡ ಸಾಧನೆಯಾಗಿದೆ ಎಂದು ಶಿಖರ್ ಧವನ್ ವಿಡಿಯೋದಲ್ಲಿ ಹೇಳಿದ್ದಾರೆ.