ಮೈಸೂರು : ಇಂದು ಬೆಳಗ್ಗೆ ಮುಡಾ ಕಚೇರಿ, ತಾಲ್ಲೂಕು ಕಚೇರಿ, ದೇವರಾಜು ಮನೆಗೆ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ತಕ್ಷಣ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ ಅವರು ಮುಡಾ ಅಧಿಕಾರಿಗಳಿಗೆ ಇಡಿಯವರು ಮೂರು ಬಾರಿ ಫೈಲ್ ಗಳನ್ನು ಕೇಳಿದ್ರೂ ಕೊಟ್ಟಿರಲಿಲ್ಲ. ಸರ್ಕಾರಕ್ಕೆ ಇದರಲ್ಲಿ ಸತ್ಯ ಹೊರಗೆ ಬರೋದು ಇಷ್ಟ ಇಲ್ಲ. ಹಾಗಾಗಿ ಫೈಲ್ಗಳನ್ನು ಕೊಟ್ಟಿರಲಿಲ್ಲ, ಇಡಿ ದಾಳಿ ಆಗಿದೆ. ಈಗಾಗಲೇ ಅಲ್ಲಿನ ಅಧಿಕಾರಿಗಳನ್ನು ಬೇರೆ ಕಡೆಗೆ ವರ್ಗಾವಣೆ ಮಾಡಲಾಗಿದೆ, ಸೈಟು ವಾಪಸ್ ಮಾಡಲಾಗಿದೆ. ಈ ಪ್ರಕರಣ ಮುಚ್ಚಿ ಹಾಕಲು ಸರ್ಕಾರ ಸಂಚು ಮಾಡಿದ್ದು, ಇತ್ತ ಲೋಕಾಯುಕ್ತ ತನಿಖೆ ಆರಂಭವಾದರೂ, ಅವರ ತನಿಖೆ ಮೇಲೆ ನಮಗೆ ಅನುಮಾನ ಇದೆ. ಲೋಕಾಯುಕ್ತದವರು ಯಾರನ್ನೂ ಕರೆದು ವಿಚಾರಣೆ ಮಾಡೇ ಇಲ್ಲ,ಹೀಗಾಗಿ ಈ ಪ್ರಕರಣ ಸಿಬಿಐಗೆ ಕೊಡಲಿ ಎಂದು ಆಗ್ರಹಿಸಿದ್ದಾರೆ.
ಇನ್ನೂ ಮುಡಾ ಪ್ರಕರಣ ಮುಚ್ಚಿ ಹಾಕುವಲ್ಲಿ ಲೋಕಾಯುಕ್ತ ಪೊಲೀಸರೂ ಶಾಮೀಲಾಗಿದ್ದು, ಇಡಿ ದಾಳಿಯಾಗಿದೆ. ಈ ತಕ್ಷಣ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು, ಹಾಗೇ ಇಡಿ ತನಿಖೆಗೆ ಭೈರತಿ ಸುರೇಶ್ ತಂದ ಫೈಲುಗಳನ್ನು ಒಪ್ಪಿಸಬೇಕು, ಇಲ್ಲದೇ ಹೋದರೆ ಸಿದ್ದರಾಮಯ್ಯ ರಾಜೀನಾಮೆ, ಬೈರತಿ ಸುರೇಶ್ ರಾಜೀನಾಮೆ ಕೊಡಬೇಕು ಇಡಿಯವರು ಸಿಎಂ ಅವರನ್ನು ಬಂಧಿಸಬೇಕು ಎಂದು ಛಲವಾದಿ ನಾರಾಯಣಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ : https://ashwaveega.com/should-stand-by-siddaramaiah-kn-rajanna/