Ashwaveega News 24×7 ಜನವರಿ 06: ಕಾಂಗ್ರೆಸ್ ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತಜ್ಞ ವೈದ್ಯರಿಂದ ಚಿಕಿತ್ಸೆ ನೀಡಲಾಗುತ್ತಿದೆ.
ಆಸ್ಪತ್ರೆಯ ವಿವರಗಳ ಪ್ರಕಾರ, ಸೋನಿಯಾ ಗಾಂಧಿ ಚೆನ್ನಾಗಿದ್ದಾರೆ ಮತ್ತು ವೈದ್ಯರ ಮೇಲ್ವಿಚಾರಣೆಯಲ್ಲಿದ್ದಾರೆ ಎನ್ನಲಾಗಿದೆ.
ಮೂಲಗಳ ಪ್ರಕಾರ, ಇದು ದಿನನಿತ್ಯದ ತಪಾಸಣೆಗೆ ಸಂಬಂಧಿಸಿದ ದಾಖಲೆ , ಅವರಿಗೆ ದೀರ್ಘಕಾಲದಿಂದ ಕೆಮ್ಮಿನ ಸಮಸ್ಯೆ ಇದ್ದು ನಿಯಮಿತ ತಪಾಸಣೆಗಾಗಿ ಅವರು ಆಸ್ಪತ್ರೆಗೆ ಬರುತ್ತಿದ್ದರು. ನಗರದ ಮಾಲಿನ್ಯ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ.
ಕಳೆದ ಡಿಸೆಂಬರ್ 2025ರಲ್ಲಿ ಅವರು 79ನೇ ವರ್ಷಕ್ಕೆ ಕಾಲಿಟ್ಟಿದ್ದರು. ವಯೋಸಹಜ ಕಾಯಿಲೆ ಮತ್ತು ದೆಹಲಿಯಲ್ಲಿನ ವಾಯುಮಾಲಿನ್ಯದಿಂದಾಗಿ ಉಸಿರಾಟದ ಕಿರಿಕಿರಿ ತಪ್ಪಿಸಲು ವೈದ್ಯಕೀಯ ತಂಡ ನಿಗಾ ವಹಿಸಿದೆ.
