Ashwaveega News 24×7 ಫೆಬ್ರವರಿ 18 -2026 : ರಾಜ್ಯದಲ್ಲಿ ವಿದ್ಯಾರ್ಥಿಗಳು ಕಾತರದಿಂದ ನಿರೀಕ್ಷಿಸಿದ್ದ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಎಸ್ಎಸ್ಎಲ್ಸಿ ಪರೀಕ್ಷೆಗಳು ಮಾರ್ಚ್ 18ರಿಂದ ಆರಂಭವಾಗಲಿದ್ದು, ರಾಜ್ಯದಾದ್ಯಂತ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿವೆ . ಅದೇ ರೀತಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಫೆಬ್ರವರಿ 28 ರಿಂದ ಆರಂಭವಾಗಲಿವೆ.
ಎಲ್ಲಾ ಪರೀಕ್ಷೆಗಳು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿವೆ ಎಂದು ಮಂಡಳಿ ತಿಳಿಸಿದೆ. ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಧ ಗಂಟೆ ಮೊದಲು ಹಾಜರಾಗುವಂತೆ ಸೂಚಿಸಲಾಗಿದೆ. ಇದೇ ವೇಳೆ, ದ್ವಿತೀಯ ಪಿಯು ಪರೀಕ್ಷೆಯ ಫಲಿತಾಂಶವನ್ನು ಏಪ್ರಿಲ್ 7ರಂದು ಪ್ರಕಟಿಸುವ ಸಾಧ್ಯತೆ ಇದೆ ಅಂತೆ . ಫಲಿತಾಂಶವನ್ನು ಮಂಡಳಿಯ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ.
ಪರೀಕ್ಷಾ ಸಿದ್ಧತೆಯಲ್ಲಿ ತೊಡಗಿರುವ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಅಗತ್ಯ ಮಾರ್ಗಸೂಚಿಗಳನ್ನು ನೀಡಿದ್ದು, ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
