
Haridwar Mansa Devi Stampede
Ashwaveega News 24×7 ಜು. 27: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ ಪರಿಣಾಮ 6 ಮಂದಿ ಭಕ್ತರು ಸಾವನ್ನಪ್ಪಿದ್ದಾರೆ.
ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಭಾರೀ ಜನಸಂದಣಿಯಿಂದ ಕಾಲ್ತುಳಿತ ಉಂಟಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಘಟನೆಯಲ್ಲಿ ಹಲವು ಭಕ್ತರು ಗಾಯಗೊಂಡಿದ್ದಾರೆ. ಇನ್ನೂ ಹಲವರು ಅಸ್ವಸ್ಥಗೊಂಡಿದ್ದಾರೆ.
ಗಾಯಾಳು ಭಕ್ತರನ್ನು ಅಂಬುಲೆನ್ಸ್ ಮೂಲಕ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.