ಆರ್ಸಿಬಿಯು ಸೋಷಿಯಲ್ ಮೀಡಿಯಾದಲ್ಲಿ ಹಿಂದಿ ಪೇಜ್ ಪ್ರಾರಂಭಿಸಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ನಡುವೆ ರಾಜ್ಯ ಸರ್ಕಾರವೇ ಮಧ್ಯಪ್ರವೇಶಿಸಿದ್ದು ತಪ್ಪನ್ನು ಸರಿಪಡಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಕನ್ನಡಿಗರಿಗೆ ಯಾವುದೇ ಕಾರಣಕ್ಕೂ ನೋವು ಮಾಡಬೇಡಿ ಎಂದು ಹೇಳಲಾಗಿದೆ. ಆರ್ಸಿಬಿ ಅವರು ಬದಲಾವಣೆ ಮಾಡಿಕೊಳ್ಳಬಹುದು ಎಂದು ಅಂದುಕೊಂಡಿದ್ದೇನೆ. ಇಲ್ಲವಾದರೆ ನಾವು ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡ್ತೀವಿ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಎಚ್ಚರಿಕೆ ನೀಡಿದ್ದಾರೆ. ಆರ್ಸಿಬಿಯ ಅಪ್ಡೇಟ್ಸ್ಗಳನ್ನು ನಾವು ಮೀಡಿಯಾದಲ್ಲಿ ಗಮನಿಸುತ್ತಿದ್ದೇವೆ.
ಆರ್ಸಿಬಿ ಪೇಜ್ ಹಿಂದಿಯಲ್ಲಿ ಮಾಡಿದ್ದಾರೆ. ಆರ್ಸಿಬಿಯನ್ನು ನಾವು ಬಹಳ ಗೌರವಿಸುತ್ತೇವೆ. ಆರ್ಸಿಬಿ ಎಷ್ಟೇ ಬಾರಿ ಸೋತರೂ ನಾವು ಆ ತಂಡವನ್ನು ಬೆಂಬಲಿಸಿಕೊಂಡು ಬಂದಿದ್ದೇವೆ. ಅದಕ್ಕೆ ಹೆಚ್ಚು ಫ್ಯಾನ್ಸ್ ಫಾಲೋಯಿಂಗ್ ಇರುವುದು ಕನ್ನಡಿಗರು ಹಾಗೂ ಕರ್ನಾಟಕದಲ್ಲಿ ಇದ್ದಾರೆ ಎಂದು ಹೇಳಿದ್ದಾರೆ.
ಆರ್ಸಿಬಿಯು ಹಿಂದಿಯಲ್ಲಿ ಪೇಜ್ ತಗೆಯುವ ಮೂಲಕ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಇದೀಗ ಮತ್ತೊಂದು ವಿಷಯದಲ್ಲಿ ಕನ್ನಡಿಗರ ಕೋಪಕ್ಕೆ ಗುರಿಯಾಗಿದೆ.